ಪ್ರತಾಪ್ ಸಿಂಹ ವಿಚಾರದಲ್ಲಿ ಸಿಎಂಗೆ ಎಚ್.ಡಿ.ಕುಮಾರಸ್ವಾಮಿ ಸಲಹೆ

04 Dec 2017 6:15 PM | General
367 Report

ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಜಾಮೀನುರಹಿತ ಕೇಸ್ ದಾಖಲಿಸಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿಕೆಯ ಮೇರೆಗೆ ತಾವು ಇಂತಹ ಉದ್ದಟತನದ ವರ್ತನೆ ತೋರಿದ್ದಾಗಿ ಪ್ರತಾಪ್ ಸಿಂಹ ಅವರೇ ವಿಡಿಯೋದಲ್ಲಿ ಹೇಳಿದ್ದರಿಂದ ಸರಕಾರ ಕೇಸ್ ದಾಖಲಿಸಬಹುದು ಎಂದು ತಿಳಿಸಿದ್ದಾರೆ.ಸಿಎಂ ಸಿದ್ದರಾಮಯ್ಯ ಸರಕಾರ, ಪ್ರಚೋದನಾಕಾರಿ ಹೇಳಿಕೆ ನೀಡಿ ರಾಜ್ಯದಲ್ಲಿ ಹಿಂಸಾಚಾರ ಸೃಷ್ಟಿಸುವ ಸಂಚು ರೂಪಿಸಿರುವ ಅಮಿತ್ ಶಾ ಮತ್ತು ಪ್ರತಾಪ್ ಸಿಂಹ ವಿರುದ್ಧ ಜಾಮೀನುರಹಿತ ಕೇಸ್ ದಾಖಲಿಸಿ ಎಂದು ಸಲಹೆ ನೀಡಿದ್ದಾರೆ.ನಿನ್ನೆ ನಡೆದ ಗಲಭೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Edited By

Shruthi G

Reported By

Shruthi G

Comments