ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ನೀಡುವುದಾಗಿ ಭರವಸೆ ಕೊಟ್ಟ ಎಚ್ ಡಿಡಿ

05 Dec 2017 10:01 AM | General
427 Report

ಜೆಡಿಎಸ್ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ. ಗೌರವಧನ ನೀಡುವುದಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಘೋಷಿಸಿದ್ದಾರೆ.

ಕೊರಟಗೆರೆ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,70 ವರ್ಷ ಮೀರಿದ ರೈತರಿಗೆ ಮಾಸಿಕ ಐದು ಸಾವಿರ ರೂ. ಸಹಾಯಧನ ನೀಡುತ್ತೇವೆ.ರೈತರು ಕಣ್ಣೀರು ಹಾಕಿದರೆ ದೇವೇಗೌಡರ ಆತ್ಮ ಸುಡುತ್ತೆ.ಆದ್ದರಿಂದ ರೈತರು ಕಂಬನಿ ಹಾಕದಂತೆ ನೋಡಿಕೊಳ್ಳುವುದು ನಮ್ಮ ಧರ್ಮ ಎಂದರು.ನಾನು ಈ ಇಳಿ ವಯಸ್ಸಿನಲ್ಲಿಯೂ ಓಡಾಡುತ್ತಿರುವುದು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಅಲ್ಲ.ಈ ರಾಜ್ಯದ ರೈತರ ಕಣ್ಣೀರು ಒರೆಸುವ ಕೆಲಸ ಮಾಡಲು ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಬೇಕಾಗಿದೆ.ಜೆಡಿಎಸ್ ದೇವೇಗೌಡರ ಕುಟುಂಬದ ಆಸ್ತಿಯಲ್ಲ. ರಾಜ್ಯದ ರೈತರ ಪರಿಸ್ಥಿತಿಯನ್ನು ನೆನೆದು ಎಷ್ಟೋ ಬಾರಿ ಒಬ್ಬನೇ ಕುಳಿತು ಅತ್ತಿದ್ದೇನೆ.ಇವರ ಕಣ್ಣೀರು ಒರೆಸುವ ಉದ್ದೇಶದಿಂದಲೇ ಮತ್ತೊಮ್ಮೆ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದೇನೆ ಎಂದು ಎಚ್.ಡಿ.ದೇವೇಗೌಡರು ನುಡಿದರು.

Edited By

Shruthi G

Reported By

Shruthi G

Comments