ಜಿಲ್ಲಾ ಕನ್ನಡ ಸಮ್ಮೇಳನದ ಅಧ್ಯಕ್ಷರಾಗಿ ಹುಲಿಕಲ್ ನಟರಾಜ್ ಆಯ್ಕೆ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ದಾಬಸ್ ಪೇಟೆಯಲ್ಲಿ ನಡೆಯಲಿರುವ 19 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ದೊಡ್ಡಬಳ್ಳಾಪುರದ ಡಾ.ಹುಲಿಕಲ್ ನಟರಾಜ್ ಆಯ್ಕೆಯಾಗಿದ್ದಾರೆ.
19 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ದೊಡ್ಡಬಳ್ಳಾಪುರಕ್ಕೆ ಸಂದ ಗೌರವವಾಗಿದೆ. ಈ ಸಮ್ಮೇಳನದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗಣ್ಯರು ತಿಳಿಸಿದ್ದಾರೆ. ಹಾಗೂ ಕರ್ನಾಟಕದ ರಕ್ಷಣಾ ವೇದಿಕೆ ಕನ್ನಡಿಗರ ಬಣದ ತಾಲ್ಲೂಕು ಘಟಕದಿಂದ ಕಾರ್ಯಕರ್ತರು ದೊಡ್ಡಬಳ್ಳಾಪುರದಿಂದ ದಾಬಸ್ ಪೇಟೆವರೆಗೆ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಿದ್ದಾರೆ ಎಂದು ತಾಲ್ಲೂಕು ಅಧ್ಯಕ್ಷ ದೀಪು ತಿಳಿಸಿದ್ದಾರೆ.
ನಿಯೋಜಿತ ಸಮ್ಮೇಳನಾಧ್ಯಕ್ಷ ಹುಲಿಕಲ್ ನಟರಾಜ್ ಮಾತನಾಡಿ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ 2019ರಲ್ಲಿ ನಡೆಯುವ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಸ್ಪರ್ಧೆ ನಿಶ್ಚಿತವಾಗಿದ್ದು, ಎಲ್ಲ ಕನ್ನಡಪರ ಮನಸ್ಸುಗಳ ಬೆಂಬಲವನ್ನು ನಿರೀಕ್ಷಿಸುತ್ತೇನೆ ಎಂದರು.ಕಸಾಪವನ್ನು ಸಮಕಾಲೀನ ಚಿಂತನೆಗಳಿಗೆ ಪೂರಕವಾಗಿ ಸಾಹಿತ್ಯಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕವಾಗಿ ಕಟ್ಟುವ ಅಗತ್ಯತೆ ಇದ್ದು, ಸಮಗ್ರ ಕನ್ನಡಿಗರ ಹಿತಾಸಕ್ತಿಯನ್ನು ಪರಿಷತ್ತು ಪ್ರತಿನಿಧಿಸುವ ಅಗತ್ಯವಿದೆ ಎಂದರು.ಈ ಸಂಬಂಧ ಹಲವು ಗಣ್ಯರು ಮತ್ತು ಸಂಘಟನೆಗಳ ಸಲಹೆ ಪಡೆಯಲಾಗಿದೆ. ಎಲ್ಲೆಡೆಯಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬರುವ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸಂಚರಿಸಿ ಪರಿಷತ್ತಿನ ಸದಸ್ಯರನ್ನು ಭೇಟಿ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.
Comments