ಇದೇ ತಿಂಗಳಲ್ಲಿ ವಿವಾಹವಾಗಲಿದ್ದಾರೆ ಕೊಹ್ಲಿ -ಅನುಷ್ಕಾ..!!

ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮುಂದಿನ ವಾರ ಮದುವೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಇಟಲಿಯಲ್ಲಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ಡಿಸೆಂಬರ್ 9, 10, 11 ಹಾಗೂ 12ರಂದು ಕೊಹ್ಲಿ-ಅನುಷ್ಕಾ ಮದುವೆಯಾಗಲಿದ್ದು, ಅದಕ್ಕಾಗಿ ಕೊಹ್ಲಿ ನಾಳೆ ಇಟಲಿಗೆ ಪ್ರಯಾಣ ಬೆಳೆಸಲಿದ್ದಾರಂತೆ. ಈಗಾಗಲೇ ಮದುವೆಗಾಗಿ ವಿರಾಟ್ ಕೊಹ್ಲಿ ಗೆಳೆಯರು ಹಾಗೂ ಕುಟುಂಬ ಇಟಲಿಗೆ ತೆರಳಲು ಟಿಕೆಟ್ ಕಾಯ್ದಿರಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಶ್ರೀಲಂಕಾ ವಿರುದ್ಧ ಏಕದಿನ ಹಾಗೂ ಟಿ-20 ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾ ಭಾಗಿಯಾಗುತ್ತಿರುವ ಕಾರಣ ಯಾವುದೇ ಕ್ರಿಕೆಟ್ ಪ್ಲೇಯರ್ಸ್ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ. ಬದಲಿಗೆ ಡಿಸೆಂಬರ್ 21ರಂದು ಮುಂಬೈನಲ್ಲಿ ನಡೆಯಲಿರುವ ಅರತಕ್ಷತೆಯಲ್ಲಿ ಅವರು ಭಾಗಿಯಾಗಿ ಶುಭ ಕೋರುವ ಸಾಧ್ಯತೆ ಇದೆ ಎನ್ನಲಾಗಿದೆ.
Comments