ಕುಮಾರಸ್ವಾಮಿಯವರನ್ನು ಸಿಎಂ ಮಾಡಲು ಯಾವ ತ್ಯಾಗಕ್ಕೂ ಸಿದ್ಧ

07 Dec 2017 10:04 AM | General
684 Report

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯ ಮಂತ್ರಿ ಮಾಡುವ ಸಲುವಾಗಿ ತಾವು ಯಾವ ತ್ಯಾಗಕ್ಕೆ ಬೇಕಾದರೂ ಸಿದ್ಧ ಎಂದು ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.

ನಗರದ ಜಿಲ್ಲಾ ಜೆಡಿಎಸ್ ಕಛೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ಪ್ರಬಲ ಅಭ್ಯರ್ಥಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿದರೆ ವಿಚಾರವನ್ನು ವರಿಷ್ಠರ ಗಮನಕ್ಕೆ ತಂದು ಸ್ಪರ್ಧೆಯಿಂದ ಹಿಂದೆ ಸರಿದು ಬೆಂಬಲ ವ್ಯಕ್ತಪಡಿ ಸುವುದಾಗಿ ತಿಳಿಸಿದರು.ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣಲು ಯಾವ ತ್ಯಾಗ ಮಾಡಲು ಸಿದ್ದ ಎಂದರು.ಅಲ್ಪಸಂಖ್ಯಾತ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಜೆಡಿಎಸ್ ಪಕ್ಷದಲ್ಲಿ ರಾಜಕೀಯ ನೆಲೆ ಕಂಡು ಕೊಂಡಿದ್ದಾರೆ. ಇಡೀ ದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜಕೀಯದಲ್ಲಿ ಹೆಚ್ಚಿನ ಸ್ಥಾನ-ಮಾನ ನೀಡಿರುವ ಪಕ್ಷವೆಂದರೆ ಅದು ಜೆಡಿಎಸ್ ಪಕ್ಷ ಎಂದರು.

ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನ ದಲ್ಲಿ ಡಿಸೆಂಬರ್ 10 ರಂದು ರಾಜ್ಯಮಟ್ಟದ ಬೃಹತ್ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ ಆಯೋಜಿಸಲಾಗಿದ್ದು 2 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಈ ಕಾರ್ಯಕ್ರಮಕ್ಕೆ ಭಾಗ ವಹಿಸಲು ಅನುಕೂಲವಾಗುವಂತೆ 100 ಬಸ್‍ಗಳ ವ್ಯವಸ್ಥೆ ಕಲ್ಪಿಸ ಲಾಗಿದೆ. ತುಮಕೂರು ಗ್ರಾಮಾಂತರ ಭಾಗದಿಂದಲೂ ಸಹ  5-6 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ 420 ಹಳ್ಳಿಗಳಿವೆ ಅದರಲ್ಲಿ 200 ಹಳ್ಳಿ ಗಳಲ್ಲಿ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮ ಪೂರ್ಣ ಗೊಂಡಿದ್ದು, ಈ ಕಾರ್ಯಕ್ರಮಕ್ಕೆ ಜನರಿಂದ ಅಭೂತಪೂರ್ವ ಸ್ಪಂದನೆ ದೊರಕುತ್ತಿದೆ. ಮುಂಬರುವ ದಿನಗಳಲ್ಲಿ ಗ್ರಾಮಾಂತರ ಭಾಗದ ಮತದಾರರು ಜೆಡಿಎಸ್ ಪಕ್ಷವನ್ನು ಬೆಂಬಲಿಸುವ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಕಳೆದ 49 ದಿನಗಳಿಂದ ಈ ಕಾರ್ಯಕ್ರಮ ಚಾಲ್ತಿಯಲ್ಲಿದೆ. ಈ ಕಾರ್ಯಕ್ರಮ ದಲ್ಲಿ ಗ್ರಾಮಾಂತರ ಭಾಗದ ಜನರ ಕುಂದುಕೊರತೆಗಳನ್ನು ಆಲಿಸಲಾಗುತ್ತಿದೆ. ಹಾಗೆ ಪಟ್ಟಿ ಮಾಡಲಾಗುತ್ತಿದೆ. ಕರ್ನಾಟಕದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿನ ಜೆಡಿಎಸ್ ಟಿಕೇಟ್ ಆಕಾಂಕ್ಷಿ ಅಭ್ಯರ್ಥಿಗಳು ಈ ಕಾರ್ಯಕ್ರಮ ಅನುಷ್ಠಾಗೊಳಿಸಿದರೆ ಯಶಸ್ಸು ನಿಶ್ಚಿತ ಎಂದರು.ದೃಶ್ಯ ಮಾಧ್ಯಮದ ವರದಿ ಗಾರನ ಮೇಲೆ ಹಲ್ಲೆ ನಡೆಸಿರುವ ಬಿಜೆಪಿ ಮುಖಂಡರ ವರ್ತನೆ ಯನ್ನು ತೀವ್ರವಾಗಿ ಖಂಡಿಸಿದ ರಲ್ಲದೆ ಯಾರೇ ಆಗಲಿ ಇಂತಹ ಕೃತ್ಯಕ್ಕೆ ಕೈಹಾಕಬಾರದು. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಮಾಧ್ಯಮ ಗಳು ನಿಸ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಲಿ. ಮಾಧ್ಯಮಗಳ ಹೋರಾಟಕ್ಕೆ ಜೆಡಿಎಸ್ ಪಕ್ಷ ಬೆಂಬಲವಿದೆ ಎಂದರು.

Edited By

Shruthi G

Reported By

Shruthi G

Comments