Report Abuse
Are you sure you want to report this news ? Please tell us why ?
ಯದುವಂಶಕ್ಕೆ ಉತ್ತರಾಧಿಕಾರಿಯ ಆಗಮನ

07 Dec 2017 10:26 AM | General
324
Report
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ.
ಮೈಸೂರು ಅರಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ರಾತ್ರಿ 9 ಗಂಟೆಗೆ ಮಹಾರಾಣಿ ತ್ರಿಷಿಕಾ ಕುಮಾರಿ ಸಿಂಗ್ ಗಂಡು ಮಗುವಿಗೆ ಜನ್ಮ ನೀಡಿದ್ದು, ರಾಜಮಾತೆ ಪ್ರಮೋದಾದೇವಿ ಹಾಗೂ ಯದುವೀರ್ ಒಡೆಯರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇಂದು ಚಾಮಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

Edited By
Hema Latha

Comments