ಜೆಡಿಎಸ್ ಪಕ್ಷದಿಂದ ಎಚ್.ಡಿ.ಕೋಟೆ ಕ್ಷೇತ್ರದ ಟಿಕೆಟ್ ಯಾರಿಗೆ?
ಎಚ್.ಡಿ. ಕೋಟೆ ಜೆಡಿಎಸ್ ಅಭ್ಯರ್ಥಿಯಾಗಿ ಹೊಸದಾಗಿ ಬರುವ ಯಾರಿಗೂ ಪಕ್ಷದಲ್ಲಿ ಟಿಕೆಟ್ ನೀಡುವುದಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿಕೆ ನೀಡುವ ಮೂಲಕ ಪಕ್ಷ ಸೇರಲು ತುದಿಗಾಲ ಮೇಲೆ ನಿಂತಿರುವ ಚಿಕ್ಕಣ್ಣ ಆಸೆಗೆ ಆರಂಭದಲ್ಲೇ ಅಡ್ಡಗಾಲು ಹಾಕಿದ್ದಾರೆ.
ಎಚ್.ಡಿ.ಕೋಟೆ ಶಾಸಕ ಚಿಕ್ಕಮಾದು ಅಕಾಲಿಕ ನಿಧನದಿಂದ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಎಂಬ ಚೆರ್ಚೆಗಳು ಆರಂಭವಾಗಿದ್ದ ಬೆನ್ನಲ್ಲೇ ಮಾಜಿ ಶಾಸಕ ಚಿಕ್ಕಣ್ಣ ಬಿಜೆಪಿ ತೊರೆದು ಜೆಡಿಎಸ್ ಸೇರಲು ವಿಧಾನ ಪರಿಷತ್ ಸದಸ್ಯ ಸಂದೇಶ ನಾಗರಾಜ್ ಮೂಲಕ ಎಚ್.ಡಿ.ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿ ಜೆಡಿಎಸ್ ಸೇರಲು ಮಾತುಕತೆ ನಡೆಸಿದ್ದರು.
ಇದಕ್ಕೆ ಮೈಸೂರು ಜಿಲ್ಲೆಯ ಜೆಡಿಎಸ್ ಶಾಸಕರಾದ ಜಿ.ಟಿ.ದೇವೇಗೌಡ ಹಾಗೂ ಸಾ.ರಾ.ಮಹೇಶ್ ವಿರೋಧ ವ್ಯಕ್ತಪಡಿಸಿರ್ದದಾರೆ. ಮಾಧ್ಯಮಗಳಿಗೆ ಶಾಸಕ ಸಾ.ರಾ.ಮಹೇಶ ಹೇಳಿಕೆ ನೀಡಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಎಚ್.ಡಿ.ಕೋಟೆಗೆ ಜೆಡಿಎಸ್ ಅಭ್ಯರ್ಥಿಯಾಗಿ ದಿ.ಚಿಕ್ಕಮಾದು ಪುತ್ರ, ಜಿಲ್ಲಾ ಪಂಚಾಯತ್ ಸದಸ್ಯ ಅನಿಲ್ ಕುಮಾರ್ ಅಥವಾ ಹಲವಾರು ವರ್ಷಗಳಿಂದ ಎಚ್.ಡಿ.ಕೋಟೆಯಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸಿರುವ ದೊಡ್ಡ ನಾಯಕ ಇವರಿಬ್ಬರಲ್ಲಿ ಯಾರಿಗದರೂ ಒಬ್ಬರಿಗೆ ಟಿಕೆಟ್ ನೀಡಲಾಗುವುದು ಎಂದಿದ್ದಾರೆ.
Comments