ನನ್ನನ್ನು ಕೆದಕಿದರೆ ಪರಿಸ್ಥಿತಿ ಸರಿಯಿರುವುದಿಲ್ಲ : ದೇವೇಗೌಡರ ಖಡಕ್ ಎಚ್ಚರಿಕೆ

ಕೆಲ ಪಕ್ಷದ ಮುಖಂಡರು ಮಿತಿಮೀರಿ ಮಾತನಾಡುತ್ತಿದ್ದು, ನನ್ನ ಬಗ್ಗೆಯೂ ಹಗುರವಾಗಿ ಮಾತನಾಡುತ್ತಿದ್ದಾರೆ. ನನ್ನನ್ನು ಕೆದಕಿದರೆ ಪರಿಸ್ಥಿತಿ ಸರಿಯಿರುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಎಚ್ಚರಿಕೆ ನೀಡಿದರು.
ಸುದ್ಧಿಗಾರರೊಂದಿಗೆ ಮಾತನಾಡಿ, ಯಾರೇ ಆಗಲಿ ಗೌರವದಿಂದ ಮಾತನಾಡಬೇಕು. 2018ರ ಚುನಾವಣೆಯಲ್ಲಿ ರಾಜ್ಯದ ಜನತೆ ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಾವೇ ಅಧಿಕಾರಕ್ಕೆ ಬರುತ್ತೇವೆ. ಒಂದು ವೇಳೆ ಅತಂತ್ರದ ಪರಿಸ್ಥಿತಿ ನಿರ್ಮಾಣವಾದರೆ, ಜೆಡಿಎಸ್ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸುತ್ತದೆಯೇ ಹೊರತು ರಾಷ್ಟ್ರೀಯ ಪಕ್ಷದೊಂದಿಗೆ ಸಖ್ಯ ಬೆಳೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Comments