ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ: ದೇವೇಗೌಡರು

ಈ ಬಾರಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದಿಲ್ಲಿ ಹೇಳಿದರು. ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಅಲ್ಪ ಸಂಖ್ಯಾತರ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ. ತುಮಕೂರಿನಲ್ಲಿ ನಡೆದ ಅಲ್ಪ ಸಂಖ್ಯಾತರ ಸಮಾವೇಶಕ್ಕೆ ಹರಿದು ಬಂದ ಜನಸಾಗರವೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ರಾಜ್ಯದ 30 ಜಿಲ್ಲೆಗಳಿಂದಲೂ ಸಾವಿರಾರು ಬಸ್, ಕಾರು, ಕ್ಯಾಬ್, ಟೆಂಪೋಗಳಲ್ಲಿ ನಿರೀಕ್ಷೆಗೂ ಮೀರಿ ಕಾರ್ಯಕ್ರಮಕ್ಕೆ ಅಲ್ಪಸಂಖ್ಯಾತರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದಾರೆ. ಇದು ಜೆಡಿಎಸ್ ಪಕ್ಷಕ್ಕೆ ಶಕ್ತಿ ತುಂಬಿದೆ. ಜನರು ಅಭೂತಪೂರ್ವ ಬೆಂಬಲ ನೀಡಿರುವುದನ್ನು ನೋಡಿದರೆ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ. ರಾಜ್ಯದಲ್ಲಿ ಅಲ್ಪ ಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ಕೇವಲ ಮತ ಬ್ಯಾಂಕನ್ನಾಗಿ ಮಾಡಿಕೊಂಡಿದೆ. ಇವರ ಅಭಿವೃದ್ಧಿಗೆ ಸಿದ್ದರಾಮಯ್ಯ ಸರ್ಕಾರ ಮೊಸಳೆ ಕಣ್ಣೀರು ಸುರಿಸಿ ಅನುಕಂಪ ಪಡೆದಿದ್ದಾರೆ. ಇವರನ್ನು ನಂಬಬೇಡಿ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು ಎಂದು ವಾಗ್ದಾಳಿ ನಡೆಸಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲ ಸೇರಿದಂತೆ ರಾಜ್ಯ ಹಾಗೂ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಪಂ ಅಧ್ಯಕ್ಷರು, ಸದಸ್ಯರು, ಮಹಾನಗರ ಪಾಲಿಕೆ ಮೇಯರ್, ಕಾಪೆರ್Çರೇಟರ್, ಪಪಂ, ಪುರಸಭೆ, ಗ್ರಾಪಂ ಸದಸ್ಯರು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು.
Comments