ಬೆಳಗೆರೆ ವಿರುದ್ಧ ‘ಬಾಡಿ ವಾರಂಟ್’

ಮಾನಹಾನಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇಲ್ಲಿನ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯವು ‘ಹಾಯ್ ಬೆಂಗಳೂರು’ ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ವಿರುದ್ಧ ‘ಬಾಡಿ ವಾರಂಟ್’ ಆದೇಶ ಹೊರಡಿಸಿದೆ. ಸಹೋದ್ಯೋಗಿ ಕೊಲೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನಿನ ಮೇಲೆ ಬುಧವಾರ ಜೈಲಿನಿಂದ ಹೊರಬಂದಿದ್ದರು.
'ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ತಮ್ಮ ವಿರುದ್ಧ ರವಿ ಬೆಳೆಗೆರೆ ಮಾನಹಾನಿಕರ ಲೇಖನ ಪ್ರಕಟಿಸಿದ್ದಾರೆ ಎಂದು ತಾಲ್ಲೂಕು ಬಗರ್‌ಹುಕುಂ ಸಮಿತಿ ಸದಸ್ಯ ಎಸ್.ಲಿಂಗರಾಜು ಅವರು 2009ರಲ್ಲಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. 2010ರಲ್ಲಿ ಸಮನ್ಸ್ ಜಾರಿಗೊಳಿಸಿದ್ದರೂ ಬೆಳಗೆರೆ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಬಳಿಕ ಕೆಲ ತಿಂಗಳ ಹಿಂದೆ ಅವರ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಲಾಗಿತ್ತು. ಇಲ್ಲಿನ ನ್ಯಾಯಾಲಯದ ಆದೇಶದಿಂದ ಬೆಳಗೆರೆಗೆ ಪುನಃ ಬಂಧನ ಭೀತಿ ಎದುರಾಗಿದೆ.
Comments