ಅಭ್ಯರ್ಥಿಗಳ ಆಯ್ಕೆ ಕುರಿತು ಎಚ್ ಡಿಕೆ ಪ್ರತಿಕ್ರಿಯೆ

16 Dec 2017 11:41 AM | General
306 Report

ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ನಡೆದಿರುವ ಪ್ರಕ್ರಿಯೆಯ ಅಂತಿಮ ಭಾಗವಾಗಿ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಬಹುತೇಕ ಅಂತಿಮಗೊಂಡಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಂಬಂಧ ದಿನಾಂಕವನ್ನೂ ಸಭೆ ನಿರ್ಣಯಿಸಲಿದೆ'' ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸಭೆಗೆ ಮುನ್ನ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು,''ರಾಜ್ಯ ವಿಧಾನಸಭೆಗೆ ಇನ್ನು ಮೂರು ತಿಂಗಳಷ್ಟೇ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಹಲವು ಮಹತ್ವದ ವಿಚಾರಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗುತ್ತಿದೆ''ಎಂದರು. ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಎಲ್ಲ ಹಿರಿಯ ನಾಯಕರು ಹಾಗೂ ಶಾಸಕರು ಪಾಲ್ಗೊಂಡಿದ್ದರು.

Edited By

Shruthi G

Reported By

Shruthi G

Comments