ರವಿ ಬೆಳಗೆರೆಗೆ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಕಳೆದ ಶನಿವಾರ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ರವಿ ಬೆಳಗೆರೆ ಅವರಿಗೆ ಸೆಷನ್ಸ್ ಕೋರ್ಟ್ ಡಿಸೆಂಬರ್ 16ರ ವರೆಗೆ ಷರತ್ತು ಬದ್ದ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಮತ್ತೆ ಮಧ್ಯಂತರ ಜಾಮೀನು ಅವಧಿಯನ್ನು ಸೋಮವಾರದವರೆಗೆ ವಿಸ್ತರಿಸಿ ಆದೇಶ ನೀಡಿದೆ.
ಮ್ಮ ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ನೀಡಿದ ಆರೋಪ ಎದುರಿಸುತ್ತಿರುವ ಹಿರಿಯ ಪತ್ರಕರ್ತ ಹಾಗೂ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಅವರ ಮಧ್ಯಂತರ ಜಾಮೀನು ಅವಧಿಯನ್ನು ಡಿಸೆಂಬರ್ 18ರ ವರೆಗೆ ವಿಸ್ತರಣೆ ಮಾಡಲಾಗಿದೆ. ತೀವ್ರ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ರವಿ ಬೆಳಗೆರೆ ಅವರನ್ನು ಜಯದೇಶ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ(ಐಸಿಯು) ದಾಖಲಿಸಲಾಗಿದೆ.
Comments