ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಜೆಡಿಎಸ್ ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕಾಪಡಲು ಅಗತ್ಯ ಸುವ್ಯವಸ್ಥೆಯನ್ನು ಕಾಪಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದಿಂದ ರಾಜ್ಯದ ಗೃಹ ಮಂತ್ರಿಗೆ ಮನವಿ ಪತ್ರ ರವಾನಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆ ಈ ಹಿಂದಿನಿಂದ ಶಾಂತಿ ಸುವ್ಯವಸ್ಥೆಗೆ ಹೆಸರಾಗಿದ್ದು, ಇತ್ತೀಚಿಗೆ ಸಮಾಜಘಾತುಕ, ವಿಚಿದ್ರಕಾರಿ ಶಕ್ತಿಗಳು ಜಿಲ್ಲೆಯ ಶಾಂತಿ ಸುವ್ಯವಸ್ಥೆ ಕದಡಲು ಪ್ರಯತ್ನಿಸುತ್ತಿರುವುದು ತುಂಬಾ ಕಳವಳಕಾರಿಯಾಗಿದೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಹಿಂದಿನಿಂದ ಎಲ್ಲ ಧರ್ಮದವರು ಸಾಮರಸ್ಯದಿಂದ ಬಾಳ್ವೆ ಮಾಡಿಕೊಂಡು ಬರುತ್ತಿದ್ದು, ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳಿಂದ ಪ್ರಕ್ಷುಬ್ದ ವಾತಾರಣ ನಿರ್ಮಾಣವಾಗಿ ಜನಸಾಮಾನ್ಯರು ಆತಂಕಗೊಳ್ಳುವಂತಾಗಿದೆ ಎಂದು ಹೇಳಿದೆ.
Comments