ಮೈಸೂರಿನಲ್ಲಿ ಬಾಂಬ್ ಬೆದರಿಕೆ ಕರೆ: ಪೊಲೀಸರಿಂದ ಪರಿಶೀಲನೆ

20 Dec 2017 1:38 PM | General
362 Report

ಬೆಳಗ್ಗೆ ಪೊಲೀಸ್ ಕಂಟ್ರೋಲ್ ರೂಂಗೆ ಬಂದ ಬಾಂಬ್ ಬೆದರಿಕೆ ಕರೆಯಿಂದಾಗಿ ಇಡೀ ಮೈಸೂರು ಒಂದು ಕ್ಷಣ ಬೆಚ್ಚಿ ಬಿದ್ದಿದೆ. ಬಾಂಬ್ ಇಟ್ಟಿರುವುದಾಗಿ ಕರೆ ಸಂಶಯಾಸ್ಪದ ವಸ್ತುಗಳ ವಶ .

ಇಂದು ಬೆಳ್ಳಂಬೆಳಗ್ಗೆ ಪೊಲೀಸ್ ಕಂಟ್ರೋಲ್ ರೂಮ್ಗೆ ಬಂದ ಕರೆಯಲ್ಲಿ ವ್ಯಕ್ತಿಯೊಬ್ಬ ಮಾತನಾಡಿ ಗ್ರಾಂಮಾಂತರ ಬಸ್ ನಿಲ್ದಾಣದ ಮುಂಭಾಗದ ಪೀಪಲ್ ಪಾರ್ಕ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಮಾಹಿತಿ ಕೊಟ್ಟಿದ್ದಾನೆ. ತಕ್ಷಣ ಎಚ್ಚೆತ್ತ ಪೊಲೀಸರು ಶ್ವಾನದಳದ ಸಹಾಯದಿಂದ ಪರಿಶೀಲನೆ ನಡೆಸಿ ಕೆಲ ಸಂಶಯಾಸ್ಪದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 

Edited By

Suresh M

Reported By

Suresh M

Comments