9ನೇ ತರಗತಿ ಬಾಲಕಿಯನ್ನು ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿ ಮರ್ಡರ್
9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ವಿಜಯಪುರದಲ್ಲಿ ಮಂಗಳವಾರ ನಡೆದಿದ್ದು, ಕಾಮುಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಬಾಲಕಿಯ ಪೋಷಕರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ಅಂಬೇಡ್ಕರ್ ವೃತ್ತದಲ್ಲಿ ನಿನ್ನೆಯಿಂದ ಬಾಲಕಿಯ ಶವವಿಟ್ಟು ಪ್ರತಿಭಟನೆ ನಡೆಸಿದ್ದು, ಬುಧವಾರ ಬೆಳಗ್ಗೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಅಲ್ಲದೇ ಬಾಲಕಿಯ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 8 ಲಕ್ಷ ರೂಪಾಯಿ ಹಾಗೂ ತಾನು ವೈಯಕ್ತಿಕವಾಗಿ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಬಳಿಕ ಬಾಲಕಿಯ ಪೋಷಕರು ಪ್ರತಿಭಟನೆಯನ್ನು ವಾಪಸ್ ತೆಗೆದುಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಶಾಲೆಗೆ ಹೋಗುತ್ತಿದ್ದ ಬಾಲಕಿ 9ನೇ ತರಗತಿ ವಿದ್ಯಾರ್ಥಿನಿ ದಾನೇಶ್ವರಿಯನ್ನು ಎಳೆದೊಯ್ದು ಕಾಮ ಪಿಶಾಚಿಗಳು ಆಕೆಯ ತಂಗಿ ಎದುರೇ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು ಎಂದು ವರದಿ ವಿವರಿಸಿದೆ.ಆರೋಪಿಗಳನ್ನು ಬಂಧಿಸಬೇಕೆಂದು ಬಾಲಕಿಯ ಪೋಷಕರು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.
Comments