ಸನ್ನಿ ಕಾರ್ಯಕ್ರಮ ಬೇಕೋ ಬೇಡವೋ..?

22 Dec 2017 1:00 PM | General
350 Report

ಹೊಸ ವರ್ಷಾಚರಣೆ ದಿನದಂದು ಬಾಲಿವುಡ್ ನಟಿ ಸನ್ನಿಲಿಯೋನ್ ನೃತ್ಯ ಕಾರ್ಯಕ್ರಮ ಆಯೋಜನೆಗೆ ಅನುಮತಿ ನೀಡುವ ಸಂಬಂಧ ಅರ್ಜಿದಾರರ ಮನವಿ ಪರಿಗಣಿಸಿ ಕಾನೂನು ಪ್ರಕಾರ ಡಿ. 25ರೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಸನ್ನಿಲಿಯೋನ್ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ನಗರ ಪೊಲೀಸರ ಕ್ರಮ ಪ್ರಶ್ನಿಸಿ ಆಯೋಜಕರಾದ ಟ್ರೈಮ್ಸ್ ಕ್ರಿಯೇಷನ್ಸ್ ಸಂಸ್ಥೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇತ್ಯರ್ಥಪಡಿಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ರಜಾಕಾಲದ ಏಕಸದಸ್ಯ ಪೀಠ ಈ ನಿರ್ದೇಶನ ನೀಡಿದೆ. ಹೊಸ ವರ್ಷಾಚರಣೆ ದಿನ ಇದೇ ರೀತಿಯ ಎಷ್ಟು ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿದೆ ಎಂಬುದರ ಬಗ್ಗೆ ಪೊಲೀಸರು ಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದ್ದು ನಗರದಲ್ಲಿ ಯಾವುದೇ ಸಂಸ್ಥೆಗೂ ಅನುಮತಿ ನೀಡಿಲ್ಲವೆಂದು ತಿಳಿಸಿದ್ದಾರೆ.ಅರ್ಜಿದಾರರು ಸಲ್ಲಿಸಿರುವ ಮನವಿ ಪತ್ರದಲ್ಲಿ ಕೆಲವೊಂದು ಆಕ್ಷೇಪಣೆಗಳಿಗೆ ಸ್ಪಷ್ಟೀಕರಣ ಬೇಕಿದ್ದು ಅದಕ್ಕಾಗಿ ಅನುಮತಿ ನೀಡಲಾಗಿಲ್ಲ. ಜೊತೆಗೆ ಈಗಾಗಲೇ ಪೊಲೀಸ್ ಆಯುಕ್ತರು ಹೊಸ ವರ್ಷಾಚರಣೆ ದಿನ ಕೈಗೊಂಡಿರುವ ಭದ್ರತಾ ಕ್ರಮಗಳ ಬಗೆಗಿನ ವಿವರಗಳನ್ನೊಳಗೊಂಡ ಅಫಿಡವಿಟ್ನ್ನು ಈಶಾನ್ಯ ವಿಭಾಗದ ಡಿಸಿಪಿ ಗಿರೀಶ್ ಪರವಾಗಿ ನ್ಯಾಯಪೀಠಕ್ಕೆ ರಾಜ್ಯಸರ್ಕಾರದ ಪರ ವಕೀಲರು ಹೇಳಿಕೆ ದಾಖಲಿಸಿದರು.

Edited By

Suresh M

Reported By

Madhu shree

Comments