ಕದ್ರಿ ಮಂಜುನಾಥ ದೇವಸ್ಥಾನದಲ್ಲಿನ ಧ್ವನಿವರ್ಧಕ ನಿಲ್ಲಿಸಲು ಆದೇಶ

ಅನ್ಯ ಧರ್ಮೀಯರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಧ್ವನಿವರ್ಧಕ ನಿಲ್ಲಿಸುವ ಸಿದ್ಧತೆ ನಡೆಸುತ್ತಿರುವುದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ದೇವಸ್ಥಾನದಲ್ಲಿ ಧ್ವನಿವರ್ಧಕ ಬಳಸುವುದರಿಂದ ಸುತ್ತಮುತ್ತಲಿನ ಮನೆಗಳಲ್ಲಿ ಇರುವವರಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ಸ್ಥಳೀಯರಾದ ಬ್ಲೇನಿ ಡಿಸೋಜ ಎಂಬವರು ಮೇಯರ್ ಹಾಗೂ ಮುಜರಾಯಿ ಇಲಾಖೆಗೆ ಪತ್ರ ಬರೆದಿದ್ದರು.
ಇವರ ದೂರಿಗೆ ಪ್ರತಿಕ್ರಿಯಿಸಿದ್ದ ಮುಜರಾಯಿ ಇಲಾಖೆ, ಸಮಸ್ಯೆ ಸರಿಪಡಿಸುವಂತೆ ದೇವಾಲಯಕ್ಕೆ ಪತ್ರ ಬರೆದಿತ್ತು. ಇದರಿಂದ ಉದ್ರಿಕ್ತಗೊಂಡ ಸ್ಥಳಿಯರು ಹಾಗೂ ವಿಶ್ವ ಹಿಂದೂ ಪರಿಷದ್ ಸದಸ್ಯರು ದೇವಾಲಯದ ಮುಂದೆ ಜಮಾಯಿಸಿ ಪ್ರತಿಭಟನೆಗೆ ಮುಂದಾದ ಕಾರಣ ಸ್ಥಳದಲ್ಲಿ ಉದ್ವಿಘ್ನ ಪರಿಸ್ಥಿತಿ ಉಂಟಾಗಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ದೇವಾಲಯಕ್ಕೆ ಭದ್ರತೆ ಒದಗಿಸಿದ್ದಾರೆ.
Comments