ಪಾಕ್ ಮೂವರು ಸೈನಿಕರನ್ನು ಹೊಡೆದುರುಳಿಸಿದ ಭಾರತ!
ಕಳೆದ ಸೆಪ್ಟೆಂಬರ್ ನಲ್ಲಿ ಪಾಕ್ ಗಡಿಯೊಳಗೆ ನುಗ್ಗಿ ಉಗ್ರರನ್ನು ಹತ್ಯೆಗೈದಿದ್ದ ಭಾರತೀಯ ಸೇನೆ ಇದೀಗ ಮತ್ತೊಮ್ಮೆ ಪಾಕ್ ಗಡಿಯೊಳಗೆ ನುಗ್ಗಿ ಪಾಕಿಸ್ತಾನಿ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿ ವಾಪಸ್ ಬಂದಿದೆ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿವೆ.
ಭಾರತದ ಭದ್ರತಾ ಪಡೆಗಳು ತಡರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ(ಪಿಒಕೆ) ಗಡಿ ನಿಯಂತ್ರಣ ರೇಖೆಯನ್ನು ದಾಟಿ ಪಾಕ್ನ ಮೂವರು ಸೈನಿಕರನ್ನು ಹೊಡೆದುರುಳಿಸಿದೆ. ಕಳೆದ ವರ್ಷದ ಸರ್ಜಿಕಲ್ ಸ್ಟ್ರೈಕ್ ನ ನೆನಪಿಸುವ ರೀತಿಯಲ್ಲಿ ಮುಂಜಾನೆ ಪಿಒಕೆಯನ್ನು ದಾಟಿದ ಭಾರತೀಯ ಸೇನೆ ಮೂವರು ಪಾಕ್ ಸೈನಿಕರನ್ನು ಹತ್ಯೆಗೈದಿದ್ದಾರೆ ಎಂದು ಮೂಲಗಳ ತಿಳಿಸಿವೆ.
ಮತ್ತೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಜಮ್ಮು-ಕಾಶ್ಮೀರ ಪೊಲೀಸರು ಪುಲ್ವಾಮಾ ಜಿಲ್ಲೆಯ ಸಂಬೂರಾ ಪ್ರದೇಶದಲ್ಲಿ ಜೈಶ್-ಇ-ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಎನ್ಕೌಂಟರ್ ನಡೆಸಿ ಸಾಯಿಸಿದ್ದಾರೆ. ಎನ್ಕೌಂಟರ್ಗೆ ಬಲಿಯಾದ ಓರ್ವ ಉಗ್ರ ಈ ವರ್ಷಾರಂಭದಲ್ಲಿ ಶ್ರೀನಗರದ ಏರ್ಪೋರ್ಟ್ಗೆ ಆತ್ಮಹತ್ಯಾ ದಾಳಿ ನಡೆಸಿದ ಮಾಸ್ಟರ್ಮೈಂಡ್ ಆಗಿದ್ದ ಎನ್ನಲಾಗಿದೆ.
Comments