ಉತ್ತರ ಕರ್ನಾಟಕ ಬಂದ್ ಗೆ ಹಲವು ಸಂಘಟನೆಗಳಿಂದ ಬೆಂಬಲ

ಮಹದಾಯಿ ವಿವಾದ ಇತ್ಯಾರ್ಥಗೊಳಿಸುವುದಾಗಿ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಈಗ ಮಾತು ತಪ್ಪಿದ್ದಾರೆ. ಅಲ್ಲದೇ ಬಿಜೆಪಿ, ಕಾಂಗ್ರೆಸ್ ಸರಿಯಾಗಿ ಸ್ಪಂದಿಸುತ್ತಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿಲುವು ಖಂಡಿಸಿ ನಾಳೆ ಉತ್ತರ ಕರ್ನಾಟಕ ಬಂದ್ ಕರೆ ನೀಡಿರುವುದಾಗಿ ಸಮಿತಿ ಹೇಳಿದೆ.
ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸಬೇಕೆಂದು ಒತ್ತಾಯಿಸಿ ಡಿಸೆಂಬರ್ 27ರಂದು ಉತ್ತರ ಕರ್ನಾಟಕ ಬಂದ್ ಗೆ ಕಳಸಾ ಬಂಡೂರಿ ಹೋರಾಟ ಸಮಿತಿ ಕರೆ ನೀಡಿದೆ. ಕಳಸಾ ಬಂಡೂರಿ ಹೋರಾಟ ಸಮಿತಿ ಬಂದ್ ಗೆ ಕನ್ನಡ ಚಿತ್ರೋದ್ಯಮ, ವಾಟಾಳ್ ನಾಗರಾಜ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಡಿಸೆಂಬರ್ 27ರ ಉತ್ತರ ಕರ್ನಾಟಕ ಬಂದ್ ವೇಳೆ ಮುಂದಿನ ಹೋರಾಟದ ರೂಪರೇಷೆ ಬಗ್ಗೆ ಚರ್ಚಿಸುವುದಾಗಿ ತಿಳಿಸಿವೆ. ಮಹದಾಯಿ ಅಚ್ಚುಕಟ್ಟು ಪ್ರದೇಶದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಂಪೂರ್ಣ ಬಂದ್ ಆಚರಣೆ ಮಾಡಲಾಗುತ್ತದೆ ಎಂದು ರೈತ ಮುಖಂಡರು ಹೇಳಿದ್ದಾರೆ.
Comments