ಸಿದ್ದಗಂಗಾ ಮಠದ ಶ್ರೀಗಳಿಗೆ ‘ಭಾರತ ರತ್ನ’ ಪ್ರಶಸ್ತಿ..!!
ಡಾ.ಶ್ರೀ ಶಿವಕುಮಾರಸ್ವಾಮೀಜಿ ಎಂದರೆ ಕಾಯಕಯೋಗಿ, ತ್ರಿವಿಧ ದಾಸೋಹಿ ಹಾಗೂ ನಡೆದಾಡುವ ದೇವರು ಎಂದೇ ಭಕ್ತರಿಂದ ಕರೆಸಿಕೊಳ್ಳುವವರು. ಶ್ರೀಗಳ ಸಮಾಜ ಸೇವೆಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಲಭಿಸುವ ದಿನ ಹತ್ತಿರವಾಗಿದೆ.
ಹೌದು, ಜನವರಿ 26ರಂದು ಗಣರಾಜ್ಯೋತ್ಸವ ಪ್ರಯುಕ್ತ ಕೇಂದ್ರ ಸರ್ಕಾರ ಸಾಹಿತ್ಯ, ಕ್ರೀಡೆ, ಸಮಾಜಸೇವೆ, ಪತ್ರಿಕೋದ್ಯಮ, ವಿಜ್ಞಾನ, ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಪ್ರಮುಖರಿಗೆ ಪದ್ಮಭೂಷಣ, ಪದ್ಮವಿಭೂಷಣ, ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಸನ್ಮಾನಿಸುವುದು ಸಂಪ್ರದಾಯವಾಗಿದೆ.ಈ ಸಂದರ್ಭದಲ್ಲಿ ಸಿದ್ದಗಂಗಾ ಶ್ರೀಗಳಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಎನಿಸಿದ ಭಾರತ ರತ್ನವನ್ನು ಘೋಷಣೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಈ ಮುಖೇನ ಕಾಯಕಯೋಗಿ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿರುವುದರಿಂದ ಭಕ್ತರ ಬಹುದಿನಗಳ ಬೇಡಿಕೆ ಈಡೇರುವ ದಿನಗಳು ಸಮೀಪಿಸಿವೆ.
Comments