ಇಂದು ದೇಶಾದ್ಯಂತ ವೈದ್ಯರ ಮುಷ್ಕರ

ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ, ಇಂದು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ದೇಶಾದ್ಯಂತ ಈಗಾಗಲೇ ಹೊರ ರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಸಂಜೆ 6 ಗಂಟೆಯವರೆಗೆ ತುರ್ತು ಸೇವೆ ಚಿಕಿತ್ಸೆ ಹೊರತುಪಡಿಸಿ ಯಾವುದೇ ಸೌಲಭ್ಯ ಇರುವುದಿಲ್ಲ.
ಭಾರತೀಯ ವೈದ್ಯಕೀಯ ಪರಿಷತ್ ಬದಲಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸಲು ಮುಂದಾಗಿರುವ ಕ್ರಮಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರ ಬದಲಿಗೆ ವೈದ್ಯಕೀಯ ಪರಿಷತ್ ಅನ್ನೇ ಬಲಪಡಿಸಬೇಕೆಂದು ವೈದ್ಯರು ಒತ್ತಾಯಿಸಿದ್ದಾರೆ. ಇವೇ ಮೊದಲಾದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಲಾಗಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ವಿರೋಧಿಸಿ ಇತ್ತೀಚೆಗೆ ರಾಜ್ಯದಲ್ಲಿ ವೈದ್ಯರು ಪ್ರತಿಭಟನೆ ನಡೆಸಿದ್ದರು. ಖಾಸಗಿ ವೈದ್ಯರು ಮುಷ್ಕರ ಕೈಗೊಂಡಿರುವ ಹಿನ್ನಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳು, ಜಿಲ್ಲಾಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
Comments