ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ
ರೈಲ್ವೇ ಪ್ರಯಾಣಿಕರಿಗೆ ಟಿಕೆಟ್ ಕಾಯ್ದಿರಿಸಲು ಆಧಾರ್ ಕಡ್ಡಾಯವಲ್ಲ ಎಂದು ರೈಲ್ವೇ ಇಲಾಖೆ ತಿಳಿಸಿದೆ. ಟಿಕೆಟ್ ಕಾಯ್ದಿರಿಸಲು ಆಧಾರ್ ಕಡ್ಡಾಯವಲ್ಲ, ಆದರೆ, ಸ್ವಯಂ ಪ್ರೇರಣೆಯಿಂದ ಆಧಾರ್ ನೀಡಲು ಉತ್ತೇಜಿಸಲಾಗುತ್ತಿದೆ ಎಂದು ರೈಲ್ವೇ ಇಲಾಖೆ ಸಹಾಯಕ ಸಚಿವ ರಾಜೇನ್ ಗೋಹನ್ ಮಾಹಿತಿ ನೀಡಿದ್ದಾರೆ. ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಸಚಿವರು, ಟಿಕೆಟ್ ಕಾಯ್ದಿರಿಸಲು ಆಧಾರ್ ಕಡ್ಡಾಯಗೊಳಿಸುವ ಪ್ರಸ್ತಾಪವಿಲ್ಲ ಎಂದು ತಿಳಿಸಿದ್ದಾರೆ.
2017 ರ ಜನವರಿ 1 ರಿಂದ ಹಿರಿಯ ನಾಗರಿಕರಿಗೆ ರಿಯಾಯಿತಿ ದರದಲ್ಲಿ ಟಿಕೆಟ್ ಕಾಯ್ದಿರಿಸುವ ಸಂದರ್ಭದಲ್ಲಿ ಆಧಾರ್ ದೃಢೀಕರಣದ ಅಗತ್ಯತೆ ಬಗ್ಗೆ ತಿಳಿಸಲಾಗ್ತಿದೆ. ಆದರೆ, ಅದು ಕಡ್ಡಾಯವಲ್ಲ ಎಂದು ಹೇಳಿದ್ದಾರೆ. ಆಧಾರ್ ಮತ್ತು ಮೊಬೈಲ್ ಸಂಖ್ಯೆ ನೀಡಿ ಟಿಕೆಟ್ ಕಾಯ್ದಿರಿಸುವ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಉತ್ತೇಜನ ನೀಡಲಿದೆ ಎಂದು ತಿಳಿಸಿದ್ದಾರೆ.
Comments