SSLC, PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
ಈಗಾಗಲೇ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಈ ಬಾರಿಯ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್ 30 ರೊಳಗೆ ಪ್ರಕಟಿಸಲಾಗುವುದು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ಈ ಕುರಿತು ಮಾಹಿತಿ ನೀಡಿದ್ದು, ಏಪ್ರಿಲ್ 30 ರೊಳಗೆ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಾರ್ಷಿಕ ಪರೀಕ್ಷೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.ಕಳೆದ ಸಲ ಪರೀಕ್ಷೆಯ ಸಂದರ್ಭದಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚಿಸಿದ್ದು, ಕರ್ನಾಟಕ ಸುರಕ್ಷಿತ ಪರೀಕ್ಷಾ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ. ಶಿಕ್ಷಕರು, ಉಪನ್ಯಾಸಕರು ಮೌಲ್ಯಮಾಪನಕ್ಕೆ ಸಹಕರಿಸುವುದಾಗಿ ಹೇಳಿದ್ದಾರೆ. ಏಪ್ರಿಲ್ 30 ರೊಳಗೆ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
Comments