ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿಕೊಂಡಿದೆ. ಪ್ರಸ್ತುತ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸದಂತೆ ಸೋಮವಾರ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದ್ದು, ಈ ಸಂಬಂಧ ಮಾರ್ಗದರ್ಶಕ ಸೂಚನೆಗಳ ಸಿದ್ಧಪಡಿಸಲು ಸಚಿವರ ಸಮಿತಿ ರಚನೆ ಮಾಡುವುದಾಗಿ ಹೇಳಿಕೆ ನೀಡಿದೆ.
ಈ ಬಗ್ಗೆ ಕೇಂದ್ರ ಗೃಹ ಇಲಾಖೆ ಸಚಿವಾಲಯದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ ಮಾಡಲಾಗಿದ್ದು, ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿರುವ ಆದೇಶವನ್ನು ಮರು ಪರಿಶೀಲಿಸುವಂತೆ ಮನವಿ ಮಾಡಿಕೊಂಡಿದೆ. 2016ರ ಸನವೆಂಬರ್ ನಲ್ಲಿ ಮೊದಲ ಬಾರಿಗೆ ಈ ಸಂಬಂಧ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಆದರೆ ಬಳಿಕ ಇದಕ್ಕೆ ವ್ಯಾಪಕ ಪರ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವವು. ಬಳಿಕ ಕಳೆದ ಅಕ್ಟೋಬರ್ ನಲ್ಲಿ ಸುಪ್ರೀಂಕೋರ್ಟ್ ಮತ್ತೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ಈ ಪ್ರಕರಣ ಸಂಬಂಧ ಕೇಂದ್ರ ಸರ್ಕಾರ ಸಚಿವರ ಸಮಿತಿ ರಚನೆ ಮಾಡಿ ಅಗತ್ಯ ಮಾರ್ಗದರ್ಶಕ ಸೂಚನೆಗಳ ಸಿದ್ಧಪಡಿಸಲು ಮುಂದಾಗಿದೆ.
Comments