ಸದ್ದಿಲ್ಲದೇ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮಾಡಿದೆ

ಗುಜರಾತ್ ಚುನಾವಣೆ ಮುಗಿಯುತ್ತಿದ್ದಂತೆ ತೈಲ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 1.55 ರೂ., ಡೀಸೆಲ್ ಬೆಲೆ ಲೀಟರ್ ಗೆ 1.50 ರೂ. ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.72 ರೂ., ಡೀಸೆಲ್ ಪ್ರತಿ ಲೀಟರ್ ಗೆ 61.83 ರೂ. ಆಗಿದೆ.
ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರ ಸದ್ದಿಲ್ಲದೇ ತೈಲ ಬೆಲೆಯನ್ನು ಏರಿಕೆ ಮಾಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಳಿತ ಕಾಣುತ್ತಿದ್ದರೂ, ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಿಲ್ಲ ಎಂದು ಇತ್ತೀಚೆಗಷ್ಟೇ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದರು. ಗುಜರಾತ್ ಚುನಾವಣೆ ಬಳಿಕ ಸದ್ದುಗದ್ದಲವಿಲ್ಲದೇ ತೈಲ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ.
Comments