ಬಡ, ಮಧ್ಯಮ ವರ್ಗದವರಿಗೆ ಶುಭ ಸುದ್ದಿ
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಶುಭ ಸುದ್ದಿ ಇಲ್ಲಿದೆ. ಇತ್ತೀಚಿನ ದಿನಗಳಲ್ಲಿ ತರಕಾರಿ ಬೆಲೆ ಏರಿಕೆಯಾಗಿ ಬಡ, ಮಧ್ಯಮ ವರ್ಗದವರ ಆತಂಕಕ್ಕೆ ಕಾರಣವಾಗಿತ್ತು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೊಪ್ಪು, ತರಕಾರಿ ಬೆಲೆಯಲ್ಲಿ ಕಡಿಮೆಯಾಗಿದೆ. ಡಿಸೆಂಬರ್ ನಲ್ಲಿ ಭಾರೀ ಪ್ರಮಾಣದಲ್ಲಿ ತರಕಾರಿ ಬೆಲೆ ಏರಿಕೆಯಾಗಿತ್ತು. ಕಳೆದ ತಿಂಗಳ ತರಕಾರಿ ಬೆಲೆಗೆ ಹೋಲಿಸಿದಾಗ, ಶೇ. 30 -40 ರಷ್ಟು ಬೆಲೆ ಇಳಿಕೆಯಾಗಿದೆ.
ಬೆಲೆ ಏರಿಕೆಯಿಂದಾಗಿ ತರಕಾರಿಗಳ ಬೆಲೆ ಕೆ.ಜಿ ಗೆ 100 ರೂ. ಸನಿಹಕ್ಕೆ ಬಂದಿತ್ತು. ಸೊಪ್ಪಿನ ಬೆಲೆಯೂ ಏರಿಕೆಯಾಗಿತ್ತು. ನವೆಂಬರ್ ನಲ್ಲಿ ಉತ್ತಮ ಮಳೆಯಾಗಿ ಅಂತರ್ಜಲದ ಪ್ರಮಾಣ ಹೆಚ್ಚಾಗಿದೆ. ಕೊಳವೆಬಾವಿಗಳಲ್ಲಿ ನೀರಿನ ಕೊರತೆಯಾಗದ ಕಾರಣ ಉತ್ತಮ ಫಸಲು ಬಂದಿದೆ. ತರಕಾರಿ, ಸೊಪ್ಪು ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿರುವುದರಿಂದ ಬೆಲೆ ಕಡಿಮೆಯಾಗಿದೆ.
Comments