ಶಿರಾಡಿ ಅಡ್ಡಹೊಳೆ ಅರಣ್ಯದಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್
ನಾಲ್ವರು ಶಂಕಿತ ನಕ್ಸಲರ ತಂಡ ಈ ಭಾಗದ ಮನೆಗಳಿಗೆ ಭೇಟಿ ನೀಡಿ ಮೊಬೈಲ್, ಲ್ಯಾಪ್ ಟಾಪ್ ಚಾರ್ಜ್ ಮಾಡಿಕೊಂಡಿದೆ. ಅಲ್ಲದೇ, ಮನೆಯವರಿಂದ ಅಡುಗೆ ಮಾಡಿಸಿಕೊಂಡು ಊಟ ಮಾಡಿ, ಅಡುಗೆ ಸಾಮಗ್ರಿಗಳನ್ನು ಪಡೆದುಕೊಂಡು ತೆರಳಿದೆ.ಸಾರ್ವಜನಿಕರು ಸೋಮವಾರ ಸಂಜೆ ಈ ಕುರಿತು ಮಾಹಿತಿ ನೀಡುತ್ತಿದ್ದಂತೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ನಕ್ಸಲ್ ನಿಗ್ರಹ ಪಡೆಯಿಂದ ಶೋಧ ಕಾರ್ಯ ನಡೆಸಲಾಗಿದೆ. ಅಡ್ಡಹೊಳೆ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ ನಡೆಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಶಿರಾಡಿ ಅಡ್ಡಹೊಳೆ ಅರಣ್ಯದಲ್ಲಿ ನಕ್ಸಲರು ಕಾಣಿಸಿಕೊಂಡ ಹಿನ್ನಲೆಯಲ್ಲಿ ನಕ್ಸಲ್ ನಿಗ್ರಹದಳದಿಂದ ಕೂಂಬಿಂಗ್ ನಡೆಸಲಾಗಿದೆ. ಶಂಕಿತ ನಕ್ಸಲರು ತಮಿಳು, ತುಳು, ಮಲಯಾಳಂ ಭಾಷೆಗಳಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಮತ್ತೆ ನಕ್ಸಲರು ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಪಡೆದು ಕೂಂಬಿಂಗ್ ನಡೆಸಲಾಗಿದೆ.
Comments