ಜನವರಿ 26 ರಂದು ಆರಂಭವಾಗಲಿದೆ ಸಂಚಾರಿ ಇಂದಿರಾ ಕ್ಯಾಂಟೀನ್
ಸಂಚಾರಿ ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಮುಹೂರ್ತ ನಿಗದಿಯಾಗಿದ್ದು, ಸಿಎಂ ಸಿದ್ದರಾಮಯ್ಯ ಜ. 26 ರಂದು ಚಾಲನೆ ನೀಡಲಿದ್ದಾರೆ. ಟೆಂಡರ್ ಮೂಲಕ 24 ವಾಹನಗಳನ್ನು ಪಡೆದು ಫುಡ್ ಆನ್ ವ್ಹೀಲ್ಸ್ ಎಂಬ ಪರಿಕಲ್ಪನೆಯಲ್ಲಿ ಸಂಚಾರಿ ಇಂದಿರಾ ಕ್ಯಾಂಟೀನ್ ನ್ನು ವಿನ್ಯಾಸ ಮಾಡಲಾಗಿದೆ.
ಇಂದಿರಾ ಕ್ಯಾಂಟೀನ್ ಗೆ ಸ್ಥಳಾವಕಾಶ ದೊರೆಯದ ನಗರದ 24 ವಾರ್ಡ್ ಗಳಲ್ಲಿ ಸಂಚಾರಿ ಇಂದಿರಾ ಕ್ಯಾಂಟೀನ್ ಆರಂಭವಾಗಲಿದೆ. ಇವು ಜ. 26 ರಿಂದ ಪ್ರತಿನಿತ್ಯ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಊಟ ಮತ್ತು ತಿಂಡಿಯನ್ನು ನಿಗದಿತ ಸ್ಥಳಗಳಲ್ಲಿ ವಿತರಿಸಲಿದೆ. ಮೊಬೈಡ್ ವಾರ್ಡ್ ಗಳಲ್ಲಿ ಬಿಲ್ ಕೌಂಟರ್, ಆಹಾರ ವಿತರಣಾ ಕೌಂಟರ್ ಗಳು, ಆಹಾರ ಬಿಸಿಯಾಗಿಡಲು ಹಾಟ್ ಕೇಸ್ ಗಳನ್ನು ಪ್ರತ್ಯೇಕವಾಗಿ ಅಳವಡಿಸಲಾಗುತ್ತದೆ. ಕುಡಿಯುವ ನೀರು, ಕೈ ತೊಳೆಯುವ ನೀರಿಗಾಗಿ ಪ್ರತ್ಯೇಕ ನೀರಿನ ಟ್ಯಾಂಕ್ ಅಳವಡಿಸಲಾಗುತ್ತದೆ. ಡ್ರೈವರ್ ಸೇರಿದಂತೆ ಐದು ಜನ ಸಿಬ್ಬಂದಿ ಪ್ರತಿ ಕ್ಯಾಂಟೀನ್ ನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
Comments