ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯ
ದ್ವಿತೀಯ ಪಿಯುಸಿ ಪರೀಕ್ಷೆ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ತಡೆಗೆ ಈ ವರ್ಷ ಇನ್ನಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಕಡ್ಡಾಯಗೊಳಿಸಿದೆ.
ಸುಮಾರು 1 ಲಕ್ಷ ರೂ. ಮೊತ್ತದೊಳಗೆ ಸಿಸಿಟಿವಿ ಕ್ಯಾಮೆರಾ ಖರೀದಿಸಲು ಲಭ್ಯವಿರುವ ಸಂಚಿತ ನಿಧಿ ಬಳಕೆ ಮಾಡಿಕೊಳ್ಳಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಆಕಾರ ವಿಕೇಂದ್ರೀಕರಣ ಹಂಚಿಕೆ ಮಾಡಿ ಸರ್ಕಾರ ಅದೇಶಿಸಿದೆ. 5 ಲಕ್ಷ ಮೊತ್ತದವರೆಗೆ ಸಿಸಿಟಿವಿ ಕ್ಯಾಮೆರಾ ಹಾಗೂ ಕಂಪ್ಯೂಟರ್ ಗಳ ಖರೀದಿಗೆ ಅನುಮತಿ ನೀಡಲು ಆಯಾ ಜಿಲ್ಲೆಗಳ ಇಲಾಖೆಯ ನಿರ್ದೇಶಕರಿಗೆ ಅವಕಾಶ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
Comments