ಕಾಶೀನಾಥ್ ಅಗಲಿಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಕಾಶಿನಾಥ್ ಅವರಿಗೆ ಸಾಯುವಂತಹ ವಯಸ್ಸೇನೂ ಆಗಿರಲಿಲ್ಲ. ನಗುತ್ತಾ, ನಗಿಸುತ್ತಾ ಕನ್ನಡ ಚಿತ್ರರಸಿಕರನ್ನು ರಂಜಿಸುತ್ತಾ ಬಂದ ಕಾಶಿನಾಥ್, ಇನ್ನಷ್ಟು ದಿನ ಇರಬೇಕಿತ್ತು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ನಿರ್ದೇಶಕ ಕಾಶಿನಾಥ್ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಹಿರಿಯ ನಟನ ಅಗಲಿಕೆ ಅತೀವ ದುಃಖ ತಂದಿದೆ ಎಂದು ಹೇಳಿದ್ದಾರೆ. ನಾನೂ ಸಹ ಕಾಶಿನಾಥ್ ಅವರ ಕೆಲವು ಚಿತ್ರಗಳನ್ನು ನೋಡಿದ್ದೇನೆ. ಅವರು ಸದಭಿರುಚಿಯ ಚಿತ್ರಗಳನ್ನು ನೀಡಿದ್ದಾರೆ. ಕಾಶಿನಾಥ್ ಅವರಿಗೆ ಸಾಯುವಂತಹ ವಯಸ್ಸೇನೂ ಆಗಿರಲಿಲ್ಲ. ಉತ್ತಮ ಕಲಾವಿದನನ್ನು ನಾವು ಕಳೆದುಕೊಂಡಿದ್ದೇವೆ. ಇವರ ನಿಧನದಿಂದ ಚಿತ್ರರಂಗಕ್ಕೆ ಭಾರೀ ನಷ್ಟವಾಗಿದೆ. ಅವರ ನಿಧನ ವೈಯಕ್ತಿಕವಾಗಿ ನನಗೆ ತುಂಬಾ ದುಃಖ ತಂದಿದೆ ಎಂದು ಹೇಳಿದರು. ಅವರ ಆತ್ಮಕ್ಕೆ ದೇವರು ಶಾಂತಿ ಕರುಣಿಸಲಿ, ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ಹೇಳಿದರು.f
Comments