ಉದ್ಯಮಿ ವಿಜಯ್ ಮಲ್ಯ ಸೇರಿದಂತೆ 18 ಮಂದಿ ವಿರುದ್ದ ಅರೆಸ್ಟ್ ವಾರಂಟ್ ಜಾರಿ
ಕಿಂಗ್ ಫಿಷರ್ ಏರ್ಲೈನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದ್ದು, 2012 ರಲ್ಲಿ ಕಿಂಗ್ ಫಿಷರ್ ಏರ್ಲೈನ್ಸ್ ಸ್ಥಗಿತಗೊಂಡಿತ್ತು. ಏರ್ಲೈನ್ಸ್ ಅಭಿವೃದ್ದಿಗೆಂದು ಬ್ಯಾಂಕುಗಳಿಂದ ಸಾಲ ಪಡೆದಿದ್ದ ವಿಜಯ್ ಮಲ್ಯ ಅದನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆಂದು ಆರೋಪಿಸಲಾಗಿತ್ತು.
ಭಾರತದ ವಿವಿಧ ಬ್ಯಾಂಕುಗಳಿಂದ ಸುಮಾರು 9 ಸಾವಿರ ಕೋಟಿ ರೂಪಾಯಿ ಸಾಲ ಪಡೆದಿರುವ ವಿಜಯ್ ಮಲ್ಯ, ಅದನ್ನು ತೀರಿಸದೆ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಅವರ ವಿರುದ್ದ ವಿವಿಧ ರಾಜ್ಯಗಳಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ಅರೆಸ್ಟ್ ವಾರೆಂಟ್ ಕೂಡಾ ಜಾರಿಯಾಗಿದೆ. ಆದರೂ ವಿಜಯ್ ಮಲ್ಯ ಭಾರತಕ್ಕೆ ಬಾರದೆ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದು, ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ.
Comments