ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ನೀಡುವಂತೆ ಮೋದಿಗೆ ಪತ್ರ ಬರೆದ ಎಸ್.ಎಂ.ಕೃಷ್ಣ
ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ 'ಭಾರತ ರತ್ನ ನೀಡುವಂತೆ ಮಾಜಿ ಮುಖ್ಯ ಮಂತ್ರಿ ಎಂ.ಎಸ್.ಕೃಷ್ಣ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಶಿವಕುಮಾರ ಸ್ವಾಮೀಜಿಗಳಿಗೆ ಇದೀಗ 111 ವರ್ಷ ವಯಸ್ಸು, ಕಳೆದ 80 ವರ್ಷಗಳಿಗಿಂತ ಹೆಚ್ಚು ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರ ದೈವಭಕ್ತಿ, ಆಂಗ್ಲ ಭಾಷೆಯ ಹಿಡಿತ, ಕನ್ನಡ ಮತ್ತು ಸಂಸ್ಕೃತ ಸಾಹಿತ್ಯದ ಮೇಲಿನ ನೈಪುಣ್ಯತೆ, ಸಾಮಾಜಿಕ ಪಿಡುಗಗಳ ವಿರುದ್ಧ ಹೋರಾಟ ಇವೆಲ್ಲಾ ಕ್ಷೇತ್ರಗಳಲ್ಲೂ ಸ್ವಾಮೀಜಿ ಸೇವೆ ಸಲ್ಲಿಸಿದ್ದಾರೆ. ಬಡವ, ಬಲ್ಲಿದರ ಪರವಾಗಿ ನಿಂತಿದ್ದಾರೆ. ಶಿವಕುಮಾರ ಸ್ವಾಮೀಜಿಯವರಿಗೆ ಭಾರತರತ್ನವನ್ನು ನೀಡಬೇಕು ಎನ್ನುವುದು ಲಕ್ಷಾಂತರ ಭಕ್ತರ ಮನವಿಯಾಗಿದೆ. ಅವರನ್ನು ನಡೆದಾಡುವ ದೇವರೆಂದೇ ಎಲ್ಲರು ನಂಬಿದ್ದಾರೆ. ಶ್ರೀಗಳಿಗೆ ಕೇಂದ್ರ ಸರ್ಕಾರ ಕೊಡ ಮಾಡುವ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.
Comments