ಬಶೀರ್ ಮಗನಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿದ ದೇವೇಗೌಡ್ರು

ಮಂಗಳೂರು: ದುಷ್ಕರ್ಮಿಗಳ ದಾಳಿಗೆ ಬಲಿಯಾದ ನಗರದ ಆಕಾಶಭವನ ನಿವಾಸಿ ಅಬ್ದುಲ್ ಬಶೀರ್ ಮನೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರು ಭೇಟಿ ನೀಡಿದ್ದಾರೆ.
ನಗರದ ಜೆಡಿಎಸ್ ಮುಖಂಡರೊಂದಿಗೆ ಮಾಜಿ ಪ್ರಧಾನಿಯವರು ಬಶೀರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಬಶೀರ್ ಅವರ ಕಿರಿಯ ಮಗನ ಬಯೋಡಾಟಾ ಪಡೆದ ಅವರು, ಉದ್ಯೋಗ ಕೊಡಿಸುವ ಭರವಸೆ ನೀಡಿದ್ದಾರೆ.ಇದಕ್ಕೂ ಮೊದಲು ಸುರತ್ಕಲ್ ನ ಕಾಟಿಪಳ್ಳದಲ್ಲಿರೋ ದೀಪಕ್ ರಾವ್ ಮನೆಗೆ ಭೇಟಿ ನೀಡಿದ್ದರು. ದೀಪಕ್ ರಾವ್ ಅವರ ತಾಯಿ ಪ್ರೇಮಾರವರ ಪರಿಸ್ಥಿತಿ ಕಂಡು ದುಖಿಃತರಾದ ದೇವೇಗೌಡರು, ದೀಪಕ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಎಚ್‍ಡಿಡಿ ಅವರಿಗೆ ಜೆಡಿಎಸ್ ಮುಖಂಡರಾದ ಬಿ.ಎಂ. ಫಾರೂಕ್, ಮಹಮ್ಮದ್ ಸಾಥ್ ನೀಡಿದರು.
Comments