ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಡೇಟಾ

24 Jan 2018 10:22 AM | General
399 Report

ಕೇಂದ್ರ ಸರ್ಕಾರದಿಂದ ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಲಾಗಿದ್ದು, ಹೈಸ್ಪೀಡ್ ಅಂತರ್ಜಾಲ ಸಂಪರ್ಕ ಒದಗಿಸುವ ದೂರಸಂಪರ್ಕ ಕಂಪನಿಗಳನ್ನು ಸಂಪರ್ಕಿಸಿ ಸೌಲಭ್ಯ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಮಾನವ ಸಂಪನ್ಮೂಲ ಸಚಿವಾಲಯದಿಂದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆಯಲಾಗಿದ್ದು, ದೂರ ಸಂಪರ್ಕ ಕಂಪನಿಗಳು, ಅಂತರ್ಜಾಲ ಸೇವೆ ಒದಗಿಸುವ ಕಂಪನಿಗಳನ್ನು ಫೆಬ್ರವರಿ 15 ರೊಳಗೆ ಸಂಪರ್ಕಿಸಿ ಆಗಸ್ಟ್ 15 ರೊಳಗೆ ಸೌಲಭ್ಯ ಕಲ್ಪಿಸುವಂತೆ ಸೂಚಿಸಲಾಗಿದೆ.

ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ. ಕಂಪನಿಗಳು ತಮ್ಮದೇ ವೆಚ್ಚದಲ್ಲಿ ಸೌಲಭ್ಯವನ್ನು ಕಲ್ಪಿಸುವುದರಿಂದ ಸಂಸ್ಥೆಗಳ ಮೇಲೆ ಹೊರೆ ಬೀಳುವುದಿಲ್ಲ ಎಂದು ಹೇಳಲಾಗಿದೆ. ಉಚಿತವಾಗಿ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು 4 ಎಂ.ಬಿ.ಪಿ.ಎಸ್. ವೇಗಕ್ಕಿಂತ ಕಡಿಮೆ ಇಲ್ಲದಂತೆ ನೀಡಲಾಗುವುದು. ಮೊಬೈಲ್/ ಲ್ಯಾಪ್ ಟಾಪ್ ಗಳಿಗೆ ವಿದ್ಯಾರ್ಥಿಗಳು ಸೌಲಭ್ಯ ಪಡೆಯಬಹುದಾಗಿದೆ.

Edited By

Shruthi G

Reported By

Madhu shree

Comments