ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ
ನಿನ್ನೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಪೂಜೆ ಮುಗಿಸಿದ ನಂತರ ಶ್ರೀಗಳಿಗೆ ಅನಾರೋಗ್ಯ ಕಾಣಿಸಿಕೊಂಡಿತು. ಕೂಡಲೇ ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಇಂದು ದಿನವಿಡೀ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುವುದು. ನಾಳೆ ಅಥವಾ ಸೋಮವಾರ ಆಸ್ಪತ್ರೆಯಿಂದ ಡಿಸಾcರ್ಜ್ ಮಾಡುವ ಸಾಧ್ಯತೆಯಿದೆ. ಮಠದಲ್ಲೂ ಶ್ರೀಗಳ ಆರೋಗ್ಯ ತಪಾಸಣೆಗಾಗಿ ವ್ಯವಸ್ಥೆ ಮಾಡಲಾಗಿದೆ.
ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಶತಾಯುಷಿ, ಭಕ್ತರ ಪಾಲಿಗೆ ನಡೆದಾಡುವ ದೇವರೆನಿಸಿಕೊಂಡ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಇಂದು ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅಗತ್ಯ ಪರೀಕ್ಷೆ ನಡೆಸಿ, ಬಳಿಕ ಶಸ್ತ್ರಚಿಕಿತ್ಸೆ ಮಾಡುವ ನಿರ್ಧಾರಕ್ಕೆ ಬರಲಾಯಿತು. ಈಗ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವಿಶೇಷ ವಾರ್ಡ್ಗೆ ಸ್ಥಳಾಂತರಿಸಲಾಗಿದೆ. ಸಂಪೂರ್ಣ ಗುಣಮುಖರಾದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆಯೇ ಎದ್ದ ಶ್ರೀಗಳು ಎಂದಿನಂತೆ ತಮ್ಮ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ್ದಾರೆ ಎನ್ನಲಾಗಿದೆ. ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಸುದ್ದಿ ಕೇಳಿ ತುಮಕೂರಿನ ಸಿದ್ದಗಂಗಾ ಮಠ ಸೇರಿದಂತೆ ರಾಜ್ಯದಲ್ಲಿ ಅವರ ಭಕ್ತರು ಸಂತಸಗೊಂಡಿದ್ದಾರೆ.
Comments