ಬಿಪಿಎಲ್ ಕಾರ್ಡ್ ದಾರರಿಗೆ ಕಂಬಳಿ ಭಾಗ್ಯ ಯೋಜನೆ
ಬಡತನ ರೇಖೆಗಿಂತ ಕೆಳಗಿನ(BPL) ಕಾರ್ಡ್ ದಾರರಿಗೆ ಕಂಬಳಿ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೆ ತರಲು ಮುಂದಾಗಿದೆ. ಕಂಬಳಿಯನ್ನು ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ನೀಡಬೇಕೆಂಬುದರ ಕುರಿತಾಗಿ ಬಜೆಟ್ ನಲ್ಲಿ ಘೋಷಿಸುವ ಸಾಧ್ಯತೆ ಇದೆ.
ಭಾಗ್ಯ ಹೆಸರಲ್ಲಿ ಹಲವು ಯೋಜನೆಗಳನ್ನು ಕಲ್ಪಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ಬಜೆಟ್ ನಲ್ಲಿ ಬಿ.ಪಿ.ಎಲ್. ಕಾರ್ಡ್ ದಾರರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದ್ದಾರೆ. ಬಿ.ಪಿ.ಎಲ್. ಕಾರ್ಡ್ ದಾರರಿಗೆ ಕಂಬಳಿ ಭಾಗ್ಯ ಯೋಜನೆ ಜಾರಿಗೆ ತರುವ ಸಾಧ್ಯತೆ ಇದೆ. ಹೊಸಪೇಟೆಯ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನಡೆದ ಹಾಲುಮತದ ಅಧ್ಯಯನ ಪೀಠದ ದಶಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಈ ಕುರಿತು ಮಾಹಿತಿ ನೀಡಿದ್ದಾರೆ. ಕಂಬಳಿ ನೇಯುವ ನೇಕಾರರು ಸಿ.ಎಂ. ಅವರನ್ನು ಭೇಟಿ ಮಾಡಿದ್ದು, ಸಂಕಷ್ಟದಲ್ಲಿರುವ ಅವರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಚಿಂತಿಸಲಾಗಿದೆ. ಬಿ.ಪಿ.ಎಲ್. ಕಾರ್ಡ್ ದಾರರಿಗೆ ಕಂಬಳಿ ಕೊಡುವ ಉದ್ದೇಶವಿದ್ದು, ಬಜೆಟ್ ನಲ್ಲಿ ಘೋಷಣೆಯಾಗಬಹುದು ಎಂದು ತಿಳಿಸಿದ್ದಾರೆ.
Comments