ಮಾರ್ಚ್ 23 ರಿಂದ ಉಪವಾಸ ಸತ್ಯಾಗ್ರಹ ನಡೆಸಲಿರುವ ಅಣ್ಣ ಹಜಾರೆ

ರೈತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ರೈತರ ಸಾಲಮನ್ನಾ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ, ಕೃಷಿ ಸಲಕರಣೆಗಳ ಮೇಲೆ ವಿಧಿಸಲಾಗಿರುವ ಶೇ. 18 ಜಿಎಸ್ ಟಿ ಕೈಬಿಡುವುದು, ಸ್ವಾಮಿನಾಥನ್ ವರದಿ ಜಾರಿಗೊಳಿಸುವುದು ಸೇರಿ ಇತರೆ ಬೇಡಿಕೆಗಳಿಗಾಗಿ ಒತ್ತಾಯಿಸಿ ಸತ್ಯಾಗ್ರಹ ನಡೆಯಲಿದೆ ಎಂದರು.
ದೇಶದಲ್ಲಿನ ರೈತರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮಾ. 23 ರಿಂದ ದೆಹಲಿಯ ರಾಮಲೀಲಾ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗುತ್ತದೆ ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಘೋಷಿದ್ದಾರೆ. ನನ್ನ ಮುಂದಿನ ಹೋರಾಟಗಳು ರೈತರ ಹಕ್ಕುಗಳಿಗಾಗಿ ನಡೆಯಲಿದ್ದು, ಸಮಸ್ಯೆಗಳು ಪರಿಹಾರ ಆಗುವವರೆಗೂ ಮುಂದುವರೆಯಲಿದೆ ಎಂದರು. ಮಾ. 23 ರಂದು ನಡೆಯಲಿರುವ ಸತ್ಯಾಗ್ರಹಕ್ಕೆ ಪೂರ್ವಭಾವಿಯಾಗಿ 2 ತಿಂಗಳಿನಿಂದ ಹಲವು ರಾಜ್ಯಗಳಿಗೆ ಭೇಟಿ ನೀಡಿದ್ದೇನೆ ಎಂದು ತಿಳಿಸಿದರು.
Comments