ಶ್ರವಣಬೆಳಗೊಳದಲ್ಲಿ 88ನೇ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ ಆರಂಭ

ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೋಳದಲ್ಲಿ 88ನೇ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ ಮಹಾಮಸ್ತಕಾಭಿಷೇಕವನ್ನು ಕಣ್ತುಂಬಿ ಕೊಳಲು ಭಕ್ತ ಜನಾಂಗ ಕಾತುರದಿಂದ ಕಾಯುತ್ತಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬೆಳಿಗ್ಗೆ 10.45 ಕ್ಕೆ ಮಹಾಮಸ್ತಕಾಭಿಷೇಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು, ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡರು ಭಾಗಿಯಾಗಲಿದ್ದಾರೆ. ಶ್ರವಣಬೆಳಗೋಳದ ಮಹಾಮಸ್ತಕಾಭಿಷೇಕಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ಫೆಬ್ರವರಿ 7 ರಿಂದ 26ರ ವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರಪತಿ ಆಗಮನದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಹಾಗೆ ಶ್ರವಣಬೆಳಗೋಳದ 5 ಕೀ.ಮೀ. ವ್ಯಾಪ್ತಿಯಲ್ಲಿ ಮದ್ಯಮಾರಾಟವನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮದ್ಯ ಮಾರಾಟ ಮಾಡಿದರೆ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.
Comments