ಇನ್ನು ಮುಂದೆ ದೇವರ ಪ್ರಸಾದ ವಿನಿಯೋಗಕ್ಕೂ ಲೈಸನ್ಸ್ ಪಡೆಯಬೇಕು..!!
ಆಹಾರ ಸುರಕ್ಷತಾ ಇಲಾಖೆಯು ಹೊಸ ನಿಯಮವನ್ನು ಜಾರಿ ಮಾಡಿದೆ, ಮುಜರಾಯಿ ಇಲಾಖೆ ದೇಗುಲ ಸೇರಿದಮತೆ ರಾಜ್ಯದ ಎಲ್ಲಾ ದೇಗುಲಗಳಿಗೆ ಚರ್ಚ್ ಹಾಗೂ ಮಸೀದಿಗಳಿಗೆ ಆಹಾರ ಸುರಕ್ಷತಾ ಇಲಾಖೆ ನೋಟಿಸ್ ಜಾರಿಮಾಡಿದ್ದು ಪ್ರಸಾದ ವಿನಿಯೋಗಕ್ಕೆ ಲೈಸನ್ಸ್ ಪಡೆಯುವಂತೆ ಸೂಚಿಸಿದೆ.
ಭಕ್ತಾದಿಗಳಿಗೆ ಪ್ರಸಾದ ವಿತರಿಸುವ ಸಲುವಾಗಿ ಆಯಾ ಧಾರ್ಮಿಕ ಸ್ಥಳಗಳ ಆಡಳಿತ ಮಂಡಳಿಗಳು ಕಡ್ಡಾಯವಾಗಿ ಪರವಾನಗಿ ಪಡೆಯುವಂತೆ ಸರ್ಕಾರ ಆದೇಶ ಹೊರಡಿಸಿದೆ. ಭಕ್ತರಿಗೆ ಪ್ರಸಾದ ರೂಪದಲ್ಲಿ ಯಾವುದೇ ಆಹಾರ ಪದಾರ್ಥ ನೀಡಿದರೂ ಅದನ್ನು ಆಹಾರ ಸುರಕ್ಷತೆ ಇಲಾಖೆಯ ಲ್ಯಾಬ್ ನಲ್ಲಿ ಪರೀಕ್ಷೆಗೆ ಒಳಪಡಿಸಬೇಕೆಂದು ಹೇಳಿದೆ. ದೇಗುಲದಲ್ಲಿ ವಿತರಣೆ ಮಾಡುವ ಪ್ರಸಾದದಲ್ಲಿ ಗುಣಮಟ್ಟ ಕಾಪಾಡುವುದಿಲ್ಲ ಎಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಮೂರು ಬಾರಿ ನೋಟಿಸ್ ನೀಡಿದ ನಂತರವೂ ಲೈಸೆನ್ಸ್ ಪಡೆಯದೇ, ಪ್ರಸಾದ ಪರೀಕ್ಷೆಗೆ ಒಳಪಡಿಸದೇ ವಿತರಣೆ ಮಾಡಿದರೆ ದಂಡ ವಿಧಿಸಲು ಆಹಾರ ಇಲಾಖೆ ನಿರ್ಧರಿಸಿದೆ.
Comments