ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಮಲಯಾಳಂ ಸೂಪರ್ ಸ್ಟಾರ್

ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸಿ, ದೇವರ ದರ್ಶನ ಪಡೆದ ಮೋಹನ್ ಲಾಲ್ ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಲಯಾಳಂನ ಬಹುನಿರೀಕ್ಷಿತ ಕಾಯಂಕುಳಂ ಕೊಚ್ಚುನ್ನಿ ಚಿತ್ರದ ಚಿತ್ರೀಕರಣ ಪುತ್ತೂರು ತಾಲೂಕಿನ ಕಡಬದ ಬಲ್ಯ ಹಾಗೂ ಪದವು ಎಂಬಲ್ಲಿ ನಡೆಯುತ್ತಿದ್ದು, ಚಿತ್ರದಲ್ಲಿ ನಿವಿನ್ ಪೌಲ್, ಪ್ರಿಯಾ ಆನಂದ್ ಮತ್ತು ಮೋಹನ್ ಲಾಲ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಹೂಡಿರುವ ಹಿನ್ನೆಲೆಯಲ್ಲಿ ಮೋಹನ್ ಲಾಲ್ ಸಹ ನಟರೊಂದಿಗೆ ಸುಬ್ರಹ್ಮಣ್ಯನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮೋಹನ್ ಲಾಲ್ ಅಭಿಮಾನಿಗಳು ನೆಚ್ಚಿನ ನಟನೊಂದಿಗೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.
Comments