ಕಾವೇರಿ ತೀರ್ಪು ಕುರಿತು ಎಚ್ ಡಿಡಿ- ಎಚ್ ಡಿಕೆ ಪ್ರತಿಕ್ರಿಯೆ

ಕಾವೇರಿ ನದಿ ನೀರು ಹಂಚಿಕೆ ಕುರಿತ ಸುಪ್ರೀಂಕೋರ್ಟ್‌ನ ಅಂತಿಮ ತೀರ್ಪು ಕುರಿತು ಎಚ್.ಡಿ. ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿವಾದ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಆದೇಶದ ಪ್ರತಿ ಸಿಕ್ಕ ನಂತರ ಪ್ರತಿಕ್ರಿಯೆ ನೀಡುವುದಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.ಕಾವೇರಿ ವಿವಾದದ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಿಸಿದೆ. ತೀರ್ಪಿನ ಪ್ರತಿ ಇನ್ನೂ ಕೈ ಸೇರಿಲ್ಲ, ತೀರ್ಪಿನ ಪ್ರತಿ ಪಡೆದು ಸಂಪೂರ್ಣ ಓದಿ ನೋಡುತ್ತೇನೆ. ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ತೀರ್ಪಿನ ಮುಖ್ಯಾಂಶಗಳು
30 ಟಿಎಂಸಿ ಕೇರಳಕ್ಕೆ, 7 ಟಿಎಂಸಿ ಪುದುಚೇರಿಗೆ ಲಭಿಸಲಿದೆ.
ಕರ್ನಾಟಕಕ್ಕೆ 270 ಇಂದ 284 ಟಿಎಂಸಿ ಅಡಿಗೆ ಏರಿಕೆ
419 ಟಿಎಂಸಿ ಇಂದ 404 ಟಿಎಂಸಿಗೆ ಇಳಿಕೆ ತಮಿಳುನಾಡು.
20 ಟಿಎಂಸಿ ಅಂತರ್ಜಲ ನೀರು ಪರಿಗಣಿಸಿ ಎಂದು ಸುಪ್ರೀಂಕೋರ್ಟ್ ಸೂಚನೆ.
ವಾರ್ಷಿಕ ಹಂಚಿಕೆ ವಿಷಯದಲ್ಲಿ ಕರ್ನಾಟಕಕ್ಕೆ 14.5 ಟಿಎಂಸಿ ಹೆಚ್ಚುವರಿ ನೀರು ಲಭ್ಯ
ಕರ್ನಾಟಕದಿಂದ ತಮಿಳುನಾಡಿಗೆ ವಾರ್ಷಿಕವಾಗಿ 177 ಟಿಎಂಸಿ ಅಡಿ ಕಾವೇರಿ ಬಿಡಬೇಕು
Comments