ಹೆಣ್ಣು ಮಕ್ಕಳ ಶಿಕ್ಷಣಕ್ಕೆ 95 ಕೋಟಿ ಮೀಸಲು
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿರುವ ರಾಜ್ಯ ಸರಕಾರ ಪದವಿಪೂರ್ವ, ಪದವಿ ಹಾಗೂ ಸ್ನಾತ ಕೋತ್ತರ ಪದವಿಗಳಿಗೆ ಪ್ರವೇಶ ಕೋರುವ ಎಲ್ಲಾ ವಿದ್ಯಾರ್ಥಿನಿಯರ ಪೂರ್ಣ ಶುಲ್ಕಕ್ಕೆ ವಿನಾಯ್ತಿ ನೀಡಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ 95 ಕೋಟಿ ಅನುದಾನವನ್ನು ಮೀಸಲಿಟ್ಟಿದೆ.
ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಯೋಜನೆಯಿಂದ 3.7 ಲಕ್ಷ ವಿದ್ಯಾರ್ಥಿನಿಯರು ಲಾಭ ಪಡೆಯಲಿದ್ದಾರೆ ಎಂದರು. ಉನ್ನತ ಶಿಕ್ಷಣ ಉತ್ಕøಷ್ಟಗೊಳಿಸಲು ಚಿಕ್ಕಮಗಳೂರಿನಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ, ಬಾಗಲಕೋಟೆಯ ಜಮಖಂಡಿಯಲ್ಲಿ ರಾಣಿ ಚೆನ್ನಮ್ಮ ವಿವಿಯ ಸ್ನಾತಕೋತ್ತರ ಕೇಂದ್ರ ಸ್ಥಾಪಿಸಲು ತಲಾ ಒಂದು ಕೋಟಿ ರು. ಅನುದಾನ ಘೋಷಿಸಿದರು.ಸಾಮಾಜಿಕ, ಸಮಾನತೆಯ ಹರಿಕಾರ ಬಸವಣ್ಣ ನವರ ಚಿಂತನೆಗಳನ್ನು ನಾಡಿನಾದ್ಯಂತ ಪಸರಿಸಲು ಮೈಸೂರು ವಿವಿಯಲ್ಲಿ ಬಸವ ಅಧ್ಯಯನ ಕೇಂದ್ರಕ್ಕೆ ಎರಡು ಕೋಟಿ ರು. ಒದಗಿಸಲಾಗಿದೆ. ಧಾರವಾಡದ ಕರ್ನಾಟಕ ವಿವಿಯಲ್ಲಿ ಕೊಂಕಣಿ ಅಧ್ಯಯನ ಪೀಠ ಸ್ಥಾಪನೆಗೆ ಒಂದು ಕೋಟಿ ಅನುದಾನ ಮೀಸಲಿಟ್ಟಿದ್ದು, ಪ್ರಸಕ್ತ ವರ್ಷ ಉನ್ನತ ಶಿಕ್ಷಣ ಇಲಾಖೆಗೆ 4514 ಕೋಟಿ ರು. ಅನು ದಾನ ಮೀಸಲಿಟ್ಟಿದ್ದಾರೆ.
Comments