ಐತಿಹಾಸಿಕ ಕ್ಷಣಗಣನೆಗೆ ಸಾಕ್ಷಿಯಾಗಲಿದೆ ಶ್ರವಣ ಬೆಳಗೊಳ
ಹಾಸನ ಜಿಲ್ಲೆ ಶ್ರವಣ ಬೆಳಗೊಳದಲ್ಲಿ ಇಂದು ಐತಿಹಾಸಿಕ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ ದೊರೆಯಲಿದ್ದು, ಸಕಲ ಸಿದ್ಧತೆಗಳೊಂದಿಗೆ ಸಂಭ್ರಮಿಸುತ್ತಿರುವ ಶ್ರಾವಣ ಬೆಳಗೊಳ. 12 ವರ್ಷಗಳಿಗೊಮ್ಮೆ ನಡೆಯುವ ಬಾಹುಬಲಿಯ ಈ ಮಹಾಮಜ್ಜನವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿರುವ ಜನ ಸಾಗರ.
ವಿಂಧ್ಯಗಿರಿಯ ಮೇಲೆ ವಿರಾಜಮಾನನಾಗಿರುವ 58.8 ಅಡಿ ಎತ್ತರದ ವಿರಾಗಿಗೆ ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆ ವರೆಗೆ ಮಸ್ತಕಾಭಿಷೇಕ ನಡೆಯಲಿದೆ. ಮಧ್ಯಾಹ್ನ 2 ರಿಂದ 3.30 ರ ವರೆಗೆ 108 ಕಳಾಭಿಷೇಕ ನಡೆಯಲಿದ್ದು, 3.30ರಿಂದ 5.30 ರ ವರೆಗೆ ಪಂಚಾಮೃತ ಅಭಿಷೇಕ ನಡೆಯಲಿದೆ. 5.30ರಿಂದ ಸಂಜೆ 6 ಗಂಟೆವರೆಗೆ ಅಷ್ಟದ್ರವ್ಯ ಪೂಜೆ ಮತ್ತು ಮಹಾಮಂಗಳಾರತಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರದಂದು ಮಹಾಮಸ್ತಕಾಭಿಷೇಕ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಲಿಕಾಫ್ಟರ್ ಮೂಲಕ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಡುವ ಮುಖ್ಯಮಂತ್ರಿ, ಮಧ್ಯಾಹ್ನ 1.50ಕ್ಕೆ ಶ್ರವಣಬೆಳಗೊಳಕ್ಕೆ ಆಗಮಿಸಲಿದ್ದಾರೆ. ಡೋಲಿಗಳ ಮೂಲಕ ವಿಂಧ್ಯಗಿರಿ ಬೆಟ್ಟಕ್ಕೆ ಸಾಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
Comments