ರೈಲ್ವೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲೇ ಬರೆಯಲು ಅವಕಾಶ ಕಲ್ಪಿಸಲಾಗಿದೆ. ರೈಲ್ವೆ ಇಲಾಖೆಯಿಂದ ಕನ್ನಡ ಸೇರಿದಂತೆ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ರೈಲ್ವೆ ಇಲಾಖೆಯಿಂದ ಸುಮಾರು 90,000 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಇತ್ತೀಚೆಗಷ್ಟೇ ಆಹ್ವಾನಿಸಲಾಗಿದೆ. ಅಲ್ಲದೇ, ಅರ್ಜಿ ಸಲ್ಲಿಕೆಯ ಅವಧಿಯನ್ನು ಕೂಡ ವಿಸ್ತರಿಸಲಾಗಿದೆ. ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ ವಯೋಮಿತಿಯನ್ನು 18 ರಿಂದ 38 ವರ್ಷಕ್ಕೆ ಹೆಚ್ಚಿಸಲಾಗಿದೆ. ಕನಿಷ್ಠ 10 ನೇ ತರಗತಿ ಪಾಸಾದವರು ಗ್ರೂಪ್ ಸಿ ವಿಭಾಗದ ಲೆವೆಲ್ 1 ಮತ್ತು ಲೆವೆಲ್ 2 ರಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮಾಹಿತಿಗೆ ರೈಲ್ವೆ ನೇಮಕಾತಿ ಮಂಡಳಿಯ ವೆಬ್ ಸೈಟ್ ಗಮನಿಸಬಹುದಾಗಿದೆ. ಇದರೊಂದಿಗೆ ಎಲ್ಲಾ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಲಾಗಿದ್ದ ಗರಿಷ್ಠ ವಯೋಮಿತಿಯನ್ನು ಪರಿಷ್ಕರಿಸಲಾಗಿದೆ. ಇದರೊಂದಿಗೆ ಎಲ್ಲಾ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಲಾಗಿದ್ದ ಗರಿಷ್ಠ ವಯೋಮಿತಿಯನ್ನು ಪರಿಷ್ಕರಿಸಲಾಗಿದೆ.
Comments