ಅಗ್ನಿ ಅವಘಡದಿಂದ ಸುಟ್ಟುಕರಕಲಾದ ಬಿಗ್ ಬಾಸ್ ಮನೆ
ರಾಮನಗರ ಜಿಲ್ಲೆಯ ಬಿಡದಿ ಬಳಿಯಲ್ಲಿರುವ ಇನ್ನೋವೇಟಿವ್ ಫಿಲ್ಮಿ ಸಿಟಿಯಲ್ಲಿ ಇಂದು ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು,ಬಿಗ್ ಬಾಸ್ ಮನೆ ಬೆಂಕಿಗಾಹುತಿಯಾಗಿದೆ.ಬೆಳಗಿನ ಜಾವ 3 ಗಂಟೆ ಸುಮಾರು ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.12 ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ. ಶಾರ್ಟ್ ಸರ್ಕ್ಯೂಟ್ ಅಗ್ನಿ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.ಇದರಿಂದಾಗಿ ಸುಮಾರು 4.5 ಕೋಟಿ ರೂ. ನಷ್ಟ ಸಂಭವಿಸಿರಬಹುದೆಂದು ಪ್ರಾಥಮಿಕ ತನಿಖೆಯಿಂದ ಅಂದಾಜಿಸಲಾಗಿದೆ. ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿರುವ ಮೇಣದ ಮ್ಯೂಸಿಯಂನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಬಳಿಕ ಇದಕ್ಕೆ ಹೊಂದಿಕೊಂಡಿರುವ ಕನ್ನಡದ ಬಿಗ್ ಬಾಸ್ ಮನೆಗೂ ವ್ಯಾಪಿಸಿದೆ, ಎಡಿಟಿಂಗ್ ರೂಂ ಬೆಂಕಿಯಿಂದ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.
Comments