ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಕಡೆಯಿಂದ ಬಂಪರ್ ಆಫರ್
ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ಪರೀಕ್ಷೆ ಬರೆಯಲಿರುವ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಗರ, ಹೊರವಲಯ, ವೇಗದೂತ, ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ, ಪರೀಕ್ಷಾ ಕೇಂದ್ರದಿಂದ ಮನೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ನೀಡಲಾಗಿದೆ.
Comments