ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟ ಉನ್ನತ ಶಿಕ್ಷಣ ಸಚಿವರು ..!!



ಕಳೆದ ವರ್ಷ ಪರಿಶಿಷ್ಟ ಜಾರಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 31, 782 ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ನೀಡಲಾಗಿತ್ತು. ಈ ಬಾರಿ 1.5 ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ನೀಡಲಾಗುತ್ತದೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಎಂದು ಹೇಳಿದರು.
ಸದ್ಯ 578 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಗುತ್ತಿದ್ದು, ಮುಂದಿನ ಒಂದು ತಿಂಗಳಲ್ಲಿ ಗುತ್ತಿಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಎಲ್ಲ ವಿದ್ಯಾರ್ಥಿಗಳಿಗೂ ಪ್ರಾಂಶುಪಾಲರ ಮೂಲಕ ಲ್ಯಾಪ್ ಟ್ಯಾಪ್ ವಿತರಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಉನ್ನತ ಶಿಕ್ಷಣ ಪ್ರಗತಿಯಲ್ಲಿ ದೇಶದಲ್ಲಿ ಕರ್ನಾಟಕವೇ ಮುಂದಿದೆ. ಶಿಕ್ಷಣದ ಪ್ರಗತಿಯಲ್ಲಿ ದೇಶದ ಪ್ರಮಾಣ ಶೇ. 24 ರಷ್ಟಿದ್ದರೆ. ರಾಜ್ಯ ಶೇ. 28 ರಷ್ಟು ಪ್ರಮಾಣ ಹೊಂದಿದೆ. ಮುಂದಿನ ಐದು ವರ್ಷಗಳಲ್ಲಿ ಶೇ. 40 ಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
Comments