ಇನ್ಮುಂದೆ ಕನ್ನಡದಲ್ಲಿ ರಾರಾಜಿಸಲಿದೆ ರೈಲು ಟಿಕೆಟ್!

ಭಾರತೀಯ ರೈಲ್ವೆ ಇಲಾಖೆ ಕನ್ನಡಿಗರಿಗೆ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ರಾಜ್ಯಾದ್ಯಂತ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಕನ್ನಡದಲ್ಲೇ ರೈಲ್ವೆ ಟಿಕೆಟ್ ವಿತರಿಸಲಾಗುತ್ತಿದೆ. ಮಾರ್ಚ್ 1 ರಿಂದ ಬೆಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರು ರೈಲು ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಕನ್ನಡ ಭಾಷೆಯಲ್ಲಿ ಮುದ್ರಿತವಾಗಿರುವ ಟಿಕೆಟ್ ಗಳನ್ನು ನೀಡಲಾಗಿದೆ.
ಇಂದಿನಿಂದ ರಾಜ್ಯದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಕನ್ನಡದಲ್ಲೇ ರೈಲ್ವೆ ಟಿಕೆಟ್ ವಿತರಿಸಲಾಗುತ್ತಿದೆ. ಕಾಯ್ದಿರಿಸಿದ ರೈಲ್ವೆ ಟಿಕೆಟ್ ಗಳಲ್ಲಿ ಪ್ರಯಾಣ ಯಾವ ನಿಲ್ದಾಣದಿಂದ ಯಾವ ನಿಲ್ದಾಣದವರೆಗೆ, ರೈಲಿನ ಸಮಯ ಮತ್ತಿತರ ವಿವರಗಳು ಕನ್ನಡದಲ್ಲಿ ಮುದ್ರಿತವಾಗಿರುತ್ತವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
Comments