ಬೆಂಗಳೂರಿನ ಜನರಿಗೆ ಸಿಹಿ ಸುದ್ದಿ...!

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ತಪ್ಪಿಸಲು ಹಲವಾರು ರೀತಿಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಹೆಲಿ ಟ್ಯಾಕ್ಸಿ ಸೇವೆ ಇಂದಿನಿಂದ ಆರಂಭವಾಗಿದೆ. ಟ್ರಾಫಿಕ್ ಸಮಸ್ಯೆ ತಪ್ಪಿಸಲು ಹಾಗೂ ಪ್ರಯಾಣ ಸಮಯವನ್ನು ಕಡಿಮೆ ಮಾಡಲು ಕೆಂಪೇಗೌಡ ವಿಮಾನನಿಲ್ದಾಣ ಹಾಗೂ ಎಲೆಕ್ಟ್ರಾನಿಕ್ ಸಿಟಿ ನಡುವೆ ಇಂದು ಹೆಲಿ ಟ್ಯಾಕ್ಸಿ ಸೇವೆ ಆರಂಭವಾಗಿದೆ.
ಇಂದು ಬೆಳಗ್ಗೆ 6.30 ಕ್ಕೆ ಎಲೆಕ್ಟ್ರಾನಿಕ್ ಸಿಟಿಯಿಂದ ಮೊದಲ ಹೆಲಿ ಟ್ಯಾಕ್ಸಿ ಟೇಕ್ ಆಗಿದೆ. ಐವರು ಗ್ರಾಹಕರು ಮುಂಗಡವಾಗಿ ತಮ್ಮ ಸೀಟ್ ಬುಕ್ ಮಾಡಿದ್ದರು. ದಿನಕ್ಕೆ ಮೂರು ಟ್ರಿಪ್ ನಂತೆ ಈ ಸೇವೆ ಇರಲಿದ್ದು, ಕೊಚ್ಚಿ ಮೂಲದ ತಂಬಿ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ಈ ಸೇವೆ ಒದಗಿಸುತ್ತಿದೆ.
Comments