ಇಂದಿರಾ ಕ್ಯಾಂಟೀನ್ ನಲ್ಲಿ ಮಹಿಳೆಯರಿಗೆ ಭರ್ಜರಿ ಔತಣ..!

07 Mar 2018 10:58 AM | General
402 Report

ಮಾರ್ಚ್ 8 ಎಂದರೆ ನೆನಪಾಗುವುದು ಇಂದು ವಿಶ್ವ ಮಹಿಳಾ ದಿನಾಚರಣೆಯಂದು ಇದಕ್ಕಾಗಿ ಸರ್ಕಾರದ ವತಿಯಿಂದ ನಗರದ ಎಲ್ಲ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಹಿಳೆಯರಿಗೆ ತಿಂಡಿ ಮತ್ತು ಊಟವನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಮೇಯರ್ ಆರ್.ಸಂಪತ್ ರಾಜ್ ಹೇಳಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಬಜೆಟ್ ಮೇಲಿನ ಚರ್ಚೆಯಲ್ಲಿ ಮೇಯರ್ ಸಂಪತ್ ರಾಜ್ ಅವರು ಈ ವಿಚಾರ ತಿಳಿಸಿದ್ದು, ನಗರದ ಎಲ್ಲ ಮಹಿಳೆಯರಿಗೆ ಉಚಿತ ತಿಂಡಿ ಮತ್ತು ಆಹಾರ ನೀಡುವುದಾಗಿ ಹೇಳಿದರು. ಇದಕ್ಕೂ ಮೊದಲು ಪಾಲಿಕೆ ಸದಸ್ಯೆಯರಿಗೆ ಮತ್ತು ಮಾಧ್ಯಮದ ಮಹಿಳೆಯರಿಗೆ ಉಚಿತವಾಗಿ ಆಹಾರ ನೀಡಲು ತೀರ್ಮಾನಿಸಿರುವುದಾಗಿ ಮೇಯರ್ ಪ್ರಕಟಿಸಿದರು. ಇದಕ್ಕೆ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಎಲ್ಲ ಮಹಿಳೆಯರಿಗೂ ನೀಡಬೇಕೆಂದು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಮೇಯರ್ ನಗರದ ಎಲ್ಲ ಮಹಿಳೆಯರಿಗೂ ಉಚಿತ ತಿಂಡಿ ಮತ್ತು ಊಟ ನೀಡುವುದಾಗಿ ಘೋಷಣೆ ಮಾಡಿದರು.

 

Edited By

Shruthi G

Reported By

Madhu shree

Comments